ಮುಡಾ ಪ್ರಕರಣ ಬಿಜೆಪಿಯ ಷಡ್ಯಂತ್ರ: ರಕ್ಷಿತ್ ಶಿವರಾಂ ಆರೋಪ

Bel_Rakshith-1
Published on

ಬೆಳ್ತಂಗಡಿ: ಮುಡಾ ಪ್ರಕರಣ ಬಿಜೆಪಿಯ ಷಡ್ಯಂತ್ರ. ಎನ್‌ಡಿಎ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯ ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್ ಪಕ್ಷದ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ. ಬಡವರ ಪರವಾಗಿರುವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net