Muda Scam| ಲೋಕಾಯುಕ್ತ ಪೊಲೀಸರಿಂದ CM Siddaramaiah ಪತ್ನಿ ವಿಚಾರಣೆ

CM Siddaramaiah
Published on

ಮೈಸೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ (Muda Scam) ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ (Cm Siddaramaiah) ಅವರ ಪತ್ನಿ ಪಾರತ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (A1), ಪಾರ್ವತಿ ಸಿದ್ದರಾಮಯ್ಯ (A2), ಮಹದೇವ್ಪ್ರಸಾದ್​ (A3), ದೇವರಾಜು (A4) ಎಂದು ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ3 ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿ ದೇವರಾಜಯ್ಯರ ವಿಚಾರಣೆ ನಡೆದಿದೆ. ಇದೀಗ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಗೌಪ್ಯ ಸ್ಥಳಕ್ಕೆ ಕರೆಸಿ ವಿಚಾರಣೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ವಿಚಾರಣೆಯೂ 12:30ರವರೆಗೂ ನಡೆದಿದೆ. ಸುದ್ದಿ ಮೂಲಗಳ ಪ್ರಕಾರ ಸಿಎಂ (CM Siddaramaiah) ಪತ್ನಿ ವಿಚಾರಣೆಗೆ ಸಹಕರಿಸಿದ್ದು, ಎಲ್ಲಾ ದಾಖಲೆಗಳನ್ನು ಒದಗಿಸಿರುವುದಾಗಿ ವರದಿಯಾಗಿದೆ. ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ಪ್ರಕರಣದ ಹಿನ್ನೆಲೆ 

ಲೇಔಟ್ ನಿರ್ಮಾಣಕ್ಕಾಗಿ ಕೆಸರೆ ಗ್ರಾಮದ 462ನೇ ಸರ್ವೇ ನಂಬರ್​ನಲ್ಲಿರುವ 3 ಎಕರೆ 16 ಗುಂಟೆ ಜಾಗವನ್ನು ಮುಡಾ ತನ್ನ ಸುಪರ್ದಿಗೆ ತಗೆದುಕೊಂಡಿತ್ತು. ಆದರೆ, ಸ್ವಾಧೀನಪಡಿಸಿಕೊಳ್ಳುವಾಗ ತಮಗೆ ಮಾಹಿತಿ ನೀಡಿಲ್ಲ. ಹಾಗಾಗಿ, ತಮಗೆ ಪರಿಹಾರ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಪಾರ್ವತಿ ಸಿದ್ದರಾಮಯ್ಯನವರು (Parvathi Siddaramaiah)  ಮುಡಾ (Muda) ಕಡೆಯಿಂದ ಪರಿಹಾರದ ರೂಪವಾಗಿ 2021ರಲ್ಲಿ ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಬೆಲೆಬಾಳುವ 14 ಸೈಟುಗಳನ್ನು ಖರೀದಿಸಿದ್ದರು. ಅವರ ಹೆಸರಿಗೆ ಆ ಸೈಟುಗಳ ಖಾತೆಯನ್ನೂ ಮಾಡಿಸಿಕೊಡಲಾಗಿತ್ತು.

ಪರಿಹಾರ ರೂಪವಾಗಿ ಅವರಿಗೆ ಸೈಟುಗಳನ್ನು ಕೊಟ್ಟು ಅವರಿಗೆ ಖಾತೆಯನ್ನೂ ಮಾಡಿಸಿರುವ ಮುಡಾ, ಇತ್ತ, ಬಡಾವಣೆಗಾಗಿ ತಾನು ವಶಪಡಿಸಿಕೊಂಡಿದ್ದ ಭೂಮಿಯ ಮಾಲೀಕತ್ವವನ್ನು ತಿದ್ದುಪಡಿ ಮಾಡಿಯೇ ಇಲ್ಲ. ಅದರಿಂದಾಗಿ, ವಶಪಡಿಸಿಕೊಂಡು ಬಡಾವಣೆ ನಿರ್ಮಿಸಲಾಗಿರುವ ಭೂಮಿಯ ಮಾಲೀಕತ್ವ ಇನ್ನೂ ಪಾರ್ವತಿಯವರ ಹೆಸರಿನಲ್ಲೇ ಇದೆ. ಕಾರ್ಡ್ಸ್ ಆಫ್ ರೈಟ್ಸ್‌ನಲ್ಲಿ, ಆರ್​ಟಿಸಿ ದಾಖಲೆಗಳಲ್ಲಿ ಈಗಲೂ ಪಾರ್ವತಿಯವರ (Parvathi Siddaramaiah) ಹೆಸರಿದ್ದು, ಈ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಗದ್ದಲವನ್ನೇ ಎಬ್ಬಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net