Muda Scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು ದುರಾದೃಷ್ಟಕರ: ಬಿ.ಕೆ ಹರಿಪ್ರಸಾದ್

bk hariprasad speaks about cm siddu
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Muda Scam) ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು, ಅನಿರೀಕ್ಷಿತ ಮಾತ್ರವಲ್ಲ ದುರಾದೃಷ್ಟಕರ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಈ ಸಂಬಂಧ ಟ್ಟೀಟ್‌ ಮಾಡಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಿ, ಮುಖ್ಯಮಂತ್ರಿಯ ವಿರುದ್ಧದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಪಷ್ಟ. ಅಲ್ಲದೆ, ಸೇಡಿನ ರಾಜಕಾರಣಕ್ಕೆ ನ್ಯಾಯಂಗದ ಮೂಲಕವೇ ಉತ್ತರ ಸಿಗಲಿದೆ ಎಂದು ಹೇಳಿದರು.

ಸೆ.25ರ ಬೆಳಗ್ಗೆ 10ಗಂಟೆಗೆ ಶಾಸಕಾಂಗ ಸಭೆ Muda Scam

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್​ ಅನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಿದೆ.

ಇದರಿಂದ ಸಿದ್ದಾರಾಮಯ್ಯ ಟೆನ್ಷನ್ ಆಗಿದ್ದು​, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net