

Muda Scam : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ತಾತ್ಕಾಲಿಕ ರೀಲಿಫ್ ನೀಡಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕಾರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ ಎಂದು ಕೋರ್ಟ್ ಮಂಗಳವಾರ ಹೇಳಿದೆ. ಅಲ್ಲದೆ, ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಪೀಠ ಸೂಚಿಸಿದೆ.
ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್ ಮೇ.7 ಕ್ಕೆ ವಿಚಾರಣೆ ಮುಂದೂಡಿದೆ.