ಮುದಗಲ್: ಕ್ರೀಡಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಸರ್ಕಾರಿ ಹುದೆಗಳನ್ನು ಪಡೆಯಬಹುದಾಗಿದೆ. ಇದಕ್ಕಾಗಿ ಸರ್ಕಾರ ಮೀಸಲಾತಿ ನಿಗದಿಪಡಿಸಿದ್ದು, ಕ್ರೀಡಾಪಟುಗಳು ಸದುಪಯೋಗ ಪಡೆಯಬೇಕೆಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಚಂದ್ರಶೇಖರ ಹೇಳಿದರು.
ಮುದಗಲ್‌ನ ಎಂ.ಗಂಗಣ್ಣ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ಲಿಂಗಸುಗೂರು ತಾಲೂಕು ಮಟ್ಟದ ಕಾಲೇಜು ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಗುರುವಾರ ಮಾತನಾಡಿದರು.
ಎಂಎಲ್ಸಿ ಶರಣಗೌಡ ಬಯ್ಯಪುರ ಮಾತನಾಡಿ, ಕಾಲೇಜು ಜೀವನದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರು ಅಭ್ಯಾಸಕ್ಕೆ ಆದ್ಯತೆ ಕೊಟ್ಟು ಸಮಯಕ್ಕನುಸಾರವಾಗಿ ಆಹಾರ ಸೇವಿಸದೆ ಆರೋಗ್ಯ ಕಾಪಾಡಿಕೊಳ್ಳದಿರುವುದನ್ನು ನೋಡುತ್ತೇವೆ. ಶಿಕ್ಷಣದೊಂದಿಗೆ ಕ್ರೀಡೆ ಕೂಡ ಅಷ್ಟೇ ಅವಶ್ಯ. ಕ್ರೀಡೆಯಲ್ಲಿ ಭಾಗವಹಿಸಬೇಕಾದರೆ ದೈಹಿಕವಾಗಿ ಸದೃಢರಾಗಿರಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. ಪುರಸಭೆ ಉಪಾಧ್ಯಕ್ಷ ಅಜಮೀರ ಬೆಳ್ಳಿಕಟ್, ಪ್ರಮುಖರಾದ ತಮ್ಮಣ್ಣ ಗುತ್ತೇದಾರ, ಮಹಿಬೂಬ ಬಾರಿಗಿಡ, ಬಸವರಾಜ ಜೆಲ್ಲಿ, ಹಸನ್, ಹುಸೇನ್ ಅಲಿ ಇತರರಿದ್ದರು.