ಮುದಗಲ್ : ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯೊಂದಿಗೆ ಸಂಸ್ಕಾರವನ್ನೂ ಮೈಗೂಡಿಸಿಕೊಂಡರೆ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಸರ್ಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಗೌರವ ಅಧ್ಯಕ್ಷ ಡಾ.ಗುರುರಾಜ ದೇಶಪಾಂಡೆ ಹೇಳಿದರು.
ಸ್ಥಳೀಯ ಪದ್ಮಾವತಿಬಾಯಿ ರಾಘವೇಂದ್ರರಾವ್ ದೇಶಪಾಂಡೆ ಪಿಕಳಿಹಾಳ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು. ವಿದ್ಯಾರ್ಥಿಗಳು ಕೀಳರಿಮೆ ತೊರೆದು ಗುರಿ ಕಡೆಗೆ ಗಮನ ಕೊಡಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವವಾಗಿದೆ ಎಂದರು.
ಪ್ರಾಚಾರ್ಯ ಡಾ.ಬಸವರಾಜ ಕಟ್ಟಿಮನಿ ಮಾತನಾಡಿ, ವಿದ್ಯಾರ್ಥಿಗಳು ಬುದ್ಧಿವಂತಿಕೆ ಮತ್ತು ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಸದಾ ಕಾಲ ಕಲಿಕೆಯತ್ತ ಚಿತ್ತ ಹರಿಸಬೇಕು ಎಂದು ಹೇಳಿದರು. ಪ್ರಾಚಾರ್ಯ ಡಾ.ಸಿದ್ದರಾಮ ಪಾಟೀಲ್, ಉಪನ್ಯಾಸಕರಾದ ವಿಶ್ವನಾಥ, ಅಮರೇಗೌಡ, ದೊಡ್ಡಬಸಪ್ಪ, ನಳೀನಾದೇವಿ. ಅಭಿವೃದ್ಧಿ ಸಮಿತಿ ಸದಸ್ಯರಾದ ಟಿ.ಆರ್.ಸೈಯದ್ ಸಾಬ್, ನ್ಯಾಮತ್ ಖಾದ್ರಿ, ಡಾ.ಮಹೇಂದ್ರಕುಮಾರ ಇದ್ದರು.