More

    ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಸಸ್ಪೆಂಡ್ ಆಗ್ತೀರಿ

    ಮುದ್ದೇಬಿಹಾಳ: ಅಂಗನವಾಡಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ಮೊಟ್ಟೆ, ಆಹಾರ ಧಾನ್ಯ ಸರಿಯಾಗಿ ವಿತರಣೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅವರು ಶುಕ್ರವಾರ ಇಲಾಖೆ ಉಪನಿರ್ದೇಶಕ, ಸಿಡಿಪಿಒ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್-19 ಹಿನ್ನೆಲೆ ಅಧಿಕಾರಿಗಳ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

    ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ, ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಇಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುತ್ತಿದ್ದೀರಿ. ಹಳ್ಳಿಗಳಿಗೆ ಬನ್ನಿ ಜನರೇ ಅಂಗನವಾಡಿಗಳಿಂದ ಮಕ್ಕಳಿಗೆ ಏನು ಸಿಗುತ್ತಿದೆ ಎಂಬುದನ್ನು ತಿಳಿಯುತ್ತದೆ ಎಂದು ಸುದ್ದಿಗಾರರು ಸಚಿವರ ಗಮನಕ್ಕೆ ತಂದರು.

    ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಚಿವೆ ಜೊಲ್ಲೆ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚವ್ಹಾಣ, ಸಿಡಿಪಿಒ ಸಾವಿತ್ರಿ ಗುಗ್ಗರಿ ಅವರನ್ನು ತರಾಟೆಗೆ ತೆಗೆದುಕೊಂಡರು. ಕಳೆದ ಅವಧಿಯಲ್ಲಿ ಸರಿಯಾಗಿ ಕೆಲಸ ಮಾಡಿದ್ದೀರಿ ಎಂದು ಒಳ್ಳೆಯ ಹೆಸರು ತೆಗೆದುಕೊಂಡು ಈಗೇಕೆ ಹೀಗೆ ಮಾಡುತ್ತಿದ್ದೀರಿ. ಇಲ್ಲಿ ನಾವೆಲ್ಲ ಏನು ಮಾಡುತ್ತಿದ್ದೇವೆ ಎಂಬುದರ ಅರಿವು ನಿಮಗಿದೆಯೇ ಎಂದು ಹರಿಹಾಯ್ದರಲ್ಲದೆ, ಸರಿಯಾಗಿ ಕೆಲಸ ಮಾಡದಿದ್ದರೆ ಇಬ್ಬರೂ ಸಸ್ಪೆಂಡ್ ಆಗ್ತೀರಿ ಎಂದು ಎಚ್ಚರಿಸಿದ ಘಟನೆ ನಡೆಯಿತು. ವಿಪ ಸದಸ್ಯ ಅರುಣ ಶಹಾಪೂರ, ತಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts