More

    ಪ್ರತಿ ಮನೆ ಮೇಲೂ ಧ್ವಜ ಹಾರಿಸಲು ಅನುಮತಿ

    ಮುದ್ದೇಬಿಹಾಳ: ಸ್ವಾತಂತ್ರೃ ಅಮೃತ ಮಹೋತ್ಸವ ನಿಮಿತ್ತ ರಾಜ್ಯ ಸರ್ಕಾರದ ಆದೇಶದಂತೆ ಸಾರ್ವಜನಿಕರು ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಬಹುದಾಗಿದೆ ಎಂದು ತಹಸೀಲ್ದಾರ್ ಬಿ.ಎಸ್.ಕಡಕಭಾವಿ ಹೇಳಿದರು. ಪಟ್ಟಣದ ವಿಜಯಮಹಾಂತೇಶ ಮಂಗಲಭವನದಲ್ಲಿ ತಾಲೂಕಾಡಳಿತದಿಂದ ಸೋಮವಾರ ಆಯೋಜಿಸಿದ್ದ ಆಝಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಪುರಸಭೆ, ಗ್ರಾಪಂ ಹಾಗೂ ಪಟ್ಟಣ ಪಂಚಾಯಿತಿಯಲ್ಲಿ ಮಾರಾಟ ಮಾಡುವ ಪ್ರತಿ ಧ್ವಜಕ್ಕೆ 22ರೂ. ನಿಗದಿಪಡಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡಲು ಸರ್ಕಾರದ ಆದೇಶ ಪಾಲಿಸಬೇಕು. ಕಚೇರಿಯನ್ನು ಸ್ವಚ್ಛಗೊಳಿಸಿ ಸ್ವಾತಂತ್ರೃದ ಹಬ್ಬ ಆಚರಿಸಲಾಗುತ್ತದೆ ಎಂದು ಹೇಳಿದರು.

    ಅಲ್ಲದೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ನಡೆಯುವ ಯುವ ಸಂಕಲ್ಪ ಯಾತ್ರೆಯಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಬಹುದು. ಆ.7ರಂದು ಮದರಿ ಕಲ್ಯಾಣಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸರ್ವರೂ ಭಾಗಿಯಾಗಲು ಆಹ್ವಾನ ನೀಡುತ್ತಿದ್ದೇವೆ ಎಂದು ಹೇಳಿದರು.

    ಬಿಇಒ ಎಸ್.ಜೆ.ನಾಯಕ, ಇಒ ಎಸ್.ವೈ.ಹೊಕ್ರಾಣಿ ಮಾತನಾಡಿ, ಪ್ರತಿ ಶಾಲೆ, ಪಂಚಾಯಿತಿಗಳಲ್ಲೂ ಸ್ವಾತಂತ್ರೃದ ಅಮೃತ ಮಹೋತ್ಸವ ಆಚರಣೆ ಯಶಸ್ವಿಗೊಳಿಸುವಂತೆ ಶಿಕ್ಷಕರು, ಪಿಡಿಒಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಧ್ವಜಗಳು ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.

    ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿದರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಆರ್.ಐ.ಹಿರೇಮಠ, ಎಂ.ಬಿ.ನಾವದಗಿ ಮಾತನಾಡಿದರು. ಸಿಪಿಐ ಆನಂದ ವಾಘ್ಮೋಡೆ, ಪ್ರಭಾರ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts