12ಕ್ಕೂ ಅಧಿಕ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಅಧಿಕಾರ

ಮುದ್ದೇಬಿಹಾಳ: ತಾಲೂಕಿನ 20 ಗ್ರಾಪಂಗಳ ಪೈಕಿ ಹನ್ನೆರಡಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಅಧ್ಯಕ್ಷ ಸ್ಥಾನಕ್ಕೇರಲಿದ್ದು, ಗ್ರಾಪಂ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ನೀಡಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಬಲ ಕುಗ್ಗಿಲ್ಲ. ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿರುವುದು ಇದಕ್ಕೆ ನಿದರ್ಶನ ಎಂದರು.

ತಂಗಡಗಿ ತಾಪಂ ಸದಸ್ಯ ಶ್ರೀಶೈಲ ಮರೋಳ ಮಾತನಾಡಿ, ತಂಗಡಗಿ ಗ್ರಾಪಂನಲ್ಲಿ ಈ ಬಾರಿ ಐತಿಹಾಸಿಕ ಗೆಲುವನ್ನು ಮತದಾರರು ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ನೀಡಿದ್ದಾರೆ. ಇದರಿಂದ ತಂಗಡಗಿ ಕಾಂಗ್ರೆಸ್ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಪ್ರತಿಪಕ್ಷದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.
ಮುಖಂಡರಾದ ರಾಜುಗೌಡ ಕೊಂಗಿ, ಬಸವರಾಜ ಇಸ್ಲಾಂಪುರ, ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ಸಂಗಣ್ಣ ದೇವರಮನಿ, ಸಂಗಣ್ಣ ಕವಡಿಮಟ್ಟಿ, ಮಲೀಕ್‌ಸಾಬ ನದಾಫ್ ಮೊದಲಾದವರು ಇದ್ದರು.

Share This Article

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…