More

    30 ಕೋಟಿ ರೂ.ಅನುದಾನ ಒದಗಿಸಲು ಒತ್ತಾಯ

    ಮುದ್ದೇಬಿಹಾಳ: ಪಟ್ಟಣದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ವಾಸಿಸುವ ಕಾಲನಿಗಳ ಅಭಿವೃದ್ಧಿಗೆ ಪುರಸಭೆಗೆ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ 30 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ ನೇತೃತ್ವದಲ್ಲಿ ಡಿಸಿಎಂ, ಲೋಕೊಪಯೋಗಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಯಿತು.
    ಪಟ್ಟಣಕ್ಕೆ ಭಾನುವಾರ ಆಗಮಿಸಿದ್ದ ವೇಳೆ ಡಿಸಿಎಂ ಅವರಿಗೆ ಮನವಿ ಸಲ್ಲಿಸಿದ ಪುರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ ಹಾಗೂ ಸದಸ್ಯರು ಮುದ್ದೇಬಿಹಾಳ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿರುವುದರಿಂದ ಪುರಸಭೆ ಅನುದಾನದಲ್ಲಿ ಎಸ್‌ಸಿ/ಎಸ್‌ಟಿ ಜನಾಂಗವಿರುವ ಪ್ರದೇಶವನ್ನು ಅಭಿವೃದ್ಧಿಪಡಿಸುವುದಕ್ಕೆ ಕಷ್ಟಸಾಧ್ಯವಾಗುತ್ತದೆ. ಅದಲ್ಲದೆ, ಎಸ್‌ಸಿ/ಎಸ್‌ಟಿ ಜನರು ವಾಸಿಸುವ ಕಾಲನಿಗಳಾದ ಡಾ.ಅಂಬೇಡ್ಕರ್ ನಗರ, ನೇತಾಜಿ ನಗರ, ಇಂದಿರಾ ನಗರ, ಪಿಲೇಕೆಮ್ಮ ನಗರ ಹಾಗೂ ಆಶ್ರಯ ಕಾಲನಿಗಳು ಅಭಿವೃದ್ಧಿಯಿಂದ ವಂಚಿತಗೊಂಡಿವೆ. ಪುರಸಭೆಗೆ ಸುಮಾರು ವರ್ಷಗಳಿಂದ ಸರ್ಕಾರದಿಂದ ಅನುದಾನ ಬಾರದೆ ಕಾಲನಿಗಳನ್ನು ಅಭಿವೃದ್ಧಿ ಪಡಿಸಲು ಆಗಿಲ್ಲ ಎಂದು ತಿಳಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ಪಟ್ಟಣದ ಎಸ್‌ಸಿ/ಎಸ್‌ಟಿ ಜನಾಂಗದವರು ವಾಸಿಸುವ ಬಡಾವಣೆಗಳನ್ನು ಅಭಿವೃದ್ಧಿಗೊಳಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲು ಮನವಿ ಮಾಡುವುದಾಗಿ ತಿಳಿಸಿದ್ದಾರೆ.

    ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರಿಗೂ ಪುರಸಭೆ ಆಡಳಿತ ಮಂಡಳಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಮನವಿ ಸಲ್ಲಿಕೆ ವೇಳೆ ಪುರಸಭೆ ಉಪಾಧ್ಯಕ್ಷೆ ಶಹಜಾದಬಿ ಹುಣಸಗಿ, ಸದಸ್ಯರಾದ ವೀರೇಶ ಹಡಲಗೇರಿ, ಶಿವು ಹರಿಜನ, ಮಹೆಬೂಬ ಗೊಳಸಂಗಿ, ಯಲ್ಲಪ್ಪ ನಾಯ್ಕಮಕ್ಕಳ, ಮುಖಂಡ ರುದ್ರಗೌಡ ಅಂಗಡಗೇರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts