More

    ಮೂರು ಲಕ್ಷ ಜನರಿಗೆ ಡಿಇಸಿ ಮಾತ್ರೆ ನುಂಗಿಸುವ ಗುರಿ

    ಮುದ್ದೇಬಿಹಾಳ: ತಾಲೂಕಿನಲ್ಲಿ ಒಟ್ಟು 3.07 ಲಕ್ಷ ಜನರಿಗೆ ಸಾಮೂಹಿಕ ಡಿಇಸಿ ಮಾತ್ರೆ ನುಂಗಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ಹೇಳಿದರು.
    ಪಟ್ಟಣದ ಹಳೇ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಅ.11ರ ವರೆಗೆ ಸಾಮೂಹಿಕ ಡಿಇಸಿ ಮತ್ತು ಅಲ್ಬೆಂಡಜೋಲ್ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 669 ಜನರನ್ನು ಈ ಕೆಲಸಕ್ಕಾಗಿ ನಿಯೋಜಿಸಲಾಗಿದೆ. ಪ್ರತಿದಿನ ಸಿಬ್ಬಂದಿ ಬೆಳಗ್ಗೆ 8 ಗಂಟೆಯಿಂದ ಸಂಜೆ 5ರ ವರಗೆ ಮನೆ ಮನೆಗೆ ಭೇಟಿ ನೀಡಿ ಮಾತ್ರೆ ನುಂಗಿಸುವರು. ಮೇಲ್ವಿಚಾರಣೆಗಾಗಿ 68 ಜನ ಸಿಬ್ಬಂದಿ ನೇಮಿಸಲಾಗಿದೆ ಎಂದರು.
    ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಜೈಬುನ್ನೀಸಾ ಬೀಳಗಿ ಮಾತನಾಡಿ, ಎರಡು ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು, ಸೋಂಕು ಹೊಂದಿದ್ದು, ಆರೋಗ್ಯವಂತರಾಗಿ ಕಾಣುವ ವ್ಯಕ್ತಿಗಳು ಈ ಮಾತ್ರೆಗಳನ್ನು ಸೇವಿಸಿದಾಗ ಮಾತ್ರ ಅವರ ರಕ್ತದಲ್ಲಿರುವ ಜಂತುಗಳು ನಾಶ ಹೊಂದುವುದರಿಂದ ಕೆಲವೊಮ್ಮೆ ಜ್ವರ, ತಲೆನೋವು, ಮೈ-ಕೈ ನೋವು, ವಾಂತಿ, ತಲೆ ಸುತ್ತುವಿಕೆ ಕಂಡು ಬರುತ್ತವೆ. ಇವು ತಾತ್ಕಾಲಿಕವಾಗಿದ್ದು, ಒಂದು ದಿನದಲ್ಲಿ ಯಾವುದೇ ಚಿಕಿತ್ಸೆಯಿಲ್ಲದೆ ಉಪಶಮನವಾಗುತ್ತವೆ. 5 ರಿಂದ 6 ವರ್ಷಗಳ ಕಾಲ ಪ್ರತಿಯೊಬ್ಬರೂ ಈ ಮಾತ್ರೆಗಳನ್ನು ಸೇವಿಸಿದಲ್ಲಿ ಮುಂದಿನ ಪೀಳಿಗೆಯವರು ಆನೆಕಾಲು ರೋಗದಿಂದ ಮುಕ್ತವಾಗುತ್ತಾರೆ ಎಂದರು. ಮುದ್ದೇಬಿಹಾಳ ತಾಲೂಕಿನ ವಿವಿಧ ಗ್ರಾಮದಲ್ಲಿ ಅಂದಾಜು 1560 ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
    ಮುಖಂಡ ಅಬ್ದುಲ್‌ಮಜೀದ್ ಮಕಾಂದಾರ್ ಮಾತನಾಡಿದರು.
    ಆರೋಗ್ಯ ಇಲಾಖೆಯ ಎಂ.ಎಸ್. ಮನಹಳ್ಳಿ, ಐ.ಸಿ. ಮಾನಕರ್, ಈರಣ್ಣ ಚಿನಿವಾರ, ಶಿವಾನಂದ ಬೊಮ್ಮನಹಳ್ಳಿ, ಆನಂದ ಬಾಗೇವಾಡಿ, ಎಂ.ಎಸ್. ಗೌಡರ, ಎಸ್.ಆರ್. ಸಜ್ಜನ, ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮಿ ಕೆಂಭಾವಿ, ಸುನಂದಾ ಅಸ್ಕಿ, ಮೋದಿನಮಾ ಮುಲ್ಲಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts