ಭಾರಿ ಬಿರುಗಾಳಿಗೆ ನೆಲಕಚ್ಚಿದ ಬಾಳೆ

ಮುದ್ದೇಬಿಹಾಳ: ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈಚೆಗೆ ಬೀಸಿದ ಭಾರಿ ಬಿರುಗಾಳಿಗೆ ರೈತ ಶ್ರೀಶೈಲ ಗುರಡ್ಡಿ ಎಂಬುವವರ ಬಾಳೆ ತೋಟದಲ್ಲಿನ ಬಾಳೆ ಗಿಡಗಳು ನೆಲಕಚ್ಚಿವೆ. ಲಕ್ಷಾಂತರ ರೂ. ಹಾನಿ ಸಂಭವಿಸಿದ್ದರೂ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ರೈತ ಶ್ರೀಶೈಲ ಗುರಡ್ಡಿ ಮಾತನಾಡಿ, ಸ್ವಂತದ ಎರಡು ಎಕರೆ ಬಾಳೆ ತೋಟ ಬಿರುಗಾಳಿಯಿಂದ ನಾಶವಾಗಿದ್ದು ಅಂದಾಜು 4-5 ಲಕ್ಷ ರೂ. ಹಾನಿ ಸಂಭವಿಸಿದೆ. ತೋಟಗಾರಿಕೆ ಇಲಾಖೆ ಹಾಗೂ ತಾಲೂಕು ಆಡಳಿತದಿಂದ ಪ್ರಕೃತಿ ವಿಕೋಪ ನಿಧಿಯಡಿ ಪರಿಹಾರ ಒದಗಿಸಿಕೊಡಬೇಕು ಎಂದು ರೈತ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *