ಮಹಿಳೆಗೆ ತರಾಟೆ

ಮುದ್ದೇಬಿಹಾಳ: ಮಣ್ಣೆತ್ತಿನ ಅಮಾವಾಸ್ಯೆ ದಿನವೇ ಬೀದಿ ಹಸು ಕಳ್ಳತನ ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಪಟ್ಟಣದ ಮಹಿಳೆಯೊಬ್ಬಳನ್ನು ಸಾರ್ವಜನಿಕ ವಾಗಿಯೇ ಕೆಲವರು ಶುಕ್ರವಾರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಸಾಯಿಖಾನೆಗೆ ಮಾರಿದ್ದ ಹಸುವನ್ನು ವಧೆ ಮಾಡಲಾಗಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಒಂದು ಸಮಾಜದ ಯುವಕರು, ಪಟ್ಟಣದ ವಾಲ್ಮೀಕಿ ಸಭಾ ಭವನದಲ್ಲಿ ಮಹಿಳೆಯನ್ನು ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಕೆಲವರು ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ಹರಿದಾಡಿದ್ದು, ಮಹಿಳೆಯ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ.