ಮುದ್ದೇಬಿಹಾಳ: ಪಟ್ಟಣದ ಎಂಜಿವಿಸಿ ಮಹಾವಿದ್ಯಾಲಯದಲ್ಲಿ ಸೋಮವಾರ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲೂಕಿನಾದ್ಯಂತ ಪಪೂ ಕಾಲೇಜು, ಐಟಿಐ, ಡಿಪ್ಲೊಮಾ ಕಾಲೇಜುಗಳಲ್ಲಿ 10,439 ವಿದ್ಯಾರ್ಥಿಗಳಿದ್ದಾರೆ. ಹಾಗೆ ಪ್ರೌಢಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳಲ್ಲಿ 12,839 ವಿದ್ಯಾರ್ಥಿಗಳಿದ್ದಾರೆ. ಒಟ್ಟು 23,278 ವಿದ್ಯಾರ್ಥಿಗಳಿಗೆ ಮುಂದಿನ 3 ದಿನಗಳೊಳಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುವುದು. 2007ರ ಜನವರಿ 1ಕ್ಕಿಂತ ಮೊದಲು ಜನಿಸಿದ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹರಾಗಿದ್ದು, ಎಲ್ಲರಿಗೂ ಆಂದೋಲನ ರೂಪದಲ್ಲಿ ಲಸಿಕೆ ನೀಡಲಾಗುವುದು. ಈಗಾಗಲೇ ಅರ್ಹ ವಿದ್ಯಾರ್ಥಿಗಳ ಪಟ್ಟಿ ತಯಾರಿಸಲಾಗಿದೆ. ಆಯಾ ಶಾಲೆ ಕಾಲೇಜುಗಳಿಗೆ ತೆರಳಿ ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.