

ಕೋಟ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಶ್ರಯದಲ್ಲಿ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಆ.27ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ತನಕ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ. ಸ್ಪರ್ಧೆ 0-2 ವರ್ಷ, 2-4 ವರ್ಷ ಮತ್ತು 4-6 ವರ್ಷದೊಳಗಿನ ಮಕ್ಕಳಿಗೆ 3 ವಿಭಾಗಗಳಿವೆ. 27ರಂದು ಬೆಳಗ್ಗೆ 8.30ರೊಳಗೆ ಸ್ಪರ್ಧಾಳುಗಳ ಹೆಸರು ಮತ್ತು ವಿವರ ನೋಂದಾಯಿಸಬಹುದು ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.