ಮುದಗಲ್ ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್

ಮುದಗಲ್: ಪಟ್ಟಣದ ಎಸ್‌ಬಿಐ ಶಾಖಾ ಕಚೇರಿಯಲ್ಲಿ ಶುಕ್ರವಾರ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ, ಗ್ರಾಹಕರ ಆತಂಕಕ್ಕೆ ಕಾರಣವಾಯಿತು. ಎಸಿ ಯಂತ್ರದ ವಯರ್‌ಗೆ ಬೆಂಕಿ ಹತ್ತಿಕೊಂಡಿತ್ತು. ತಕ್ಷಣವೇ ಬ್ಯಾಂಕ್ ಸಿಬ್ಬಂದಿ ಬೆಂಕಿ ನಂದಕಗಳ ಸಹಾಯದಿಂದ ಆರಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದರು. ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಗ್ರಾಹಕರು ಆತಂಕಗೊಂಡಿದ್ದರು. ಆದರೆ, ಕೂಡಲೇ ಬೆಂಕಿ ನಂದಿಸಿದ್ದರಿಂದ ಕಂಪ್ಯೂಟರ್ ಸೇರಿ ಯಾವುದೇ ವಸ್ತುಗಳಿಗೆ ಹಾನಿಯಾಗಿಲ್ಲ ಎಂದು ಸಿಬ್ಬಂದಿ ತಿಳಿಸಿದರು. ನಂತರ ಸ್ಥಳಕ್ಕೆ ಬಂದ ಜೆಸ್ಕಾಂ ಸಿಬ್ಬಂದಿ ಶಾರ್ಟ್ ಸರ್ಕ್ಯೂಟ್ ಆದ ಎಸಿ ಪರಿಶೀಲಿಸಿ ಸರಿಪಡಿಸಿದರು.