More

    ಕಳಪೆ ಕಾಮಗಾರಿಗೆ ಆಕ್ರೋಶ


    ಮುದಗಲ್: ಉಪ್ಪಾರನಂದಿಹಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

    2020-21ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ದಿ ಯೋಜನೆ ಅಡಿಯಲ್ಲಿ 32 ಲಕ್ಷ ರೂ.ಗಳ ವೆಚ್ಚದಲ್ಲಿ ಮೂರು ಕೊಠಡಿ ಕಾಮಗಾರಿಯ ಗುತ್ತಿಗೆ ಪಡೆದಿರುವವರು ಕಳಪೆ ಮರಳು ಹಾಗೂ ಹಳೆಯ ಶಾಲಾ ಕಟ್ಟಡದ ಕಲ್ಲುಗಳನ್ನು ಬಳಸಿ ನಿರ್ಮಿಸುತಿದ್ದಾರೆ. ಇದರಿಂದ ಶಾಲಾ ಕೊಠಡಿ ಗೋಡೆ ಬಿರುಕು ಬಿಟ್ಟಿದೆ. ಕಾಟಾಚಾರದ ಕೆಲಸ ಮಾಡಿದ್ದಾರೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಿ ಗುಣಮಟ್ಟದ ಕಟ್ಟಡ ನಿರ್ಮಿಸಬೇಕು ಎಂದು ಗ್ರಾಮಸ್ಥರಾದ ಹುಸೇನ ಸಾಬ ಕಡಿವಾಲ, ಮೊಹಿನುದ್ದೀನ್ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts