More

    ಈ ವರ್ಷವೇ ಬಸ್ ನಿಲ್ದಾಣ ಉದ್ಘಾಟನೆ

    ಮುಧೋಳ: ನಗರದಲ್ಲಿ 5 ಕೋಟಿ ರೂ. ವೆಚ್ಚದ ಸುಸಜ್ಜಿತ ಬಸ್ ನಿಲ್ದಾಣವನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಿ ಮುಂದಿನ ವರ್ಷವೇ ಉದ್ಘಾಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ವ್ಯಕ್ತಪಡಿಸಿದರು.

    ನಗರದ ಬಸ್ ನಿಲ್ದಾಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೂತನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರೊನಾ ಸಮಯದಲ್ಲಿ ರಾಜ್ಯದಲ್ಲಿ ಹೆಚ್ಚು ನಷ್ಟದಲ್ಲಿರುವ ಇಲಾಖೆ ಸಾರಿಗೆ ಇಲಾಖೆಯಾಗಿದ್ದು, ಈ ಸಮಯದಲ್ಲಿ 2,300 ಕೋಟಿ ರೂ. ನಷ್ಟವಾಗಿದೆ. ಇದನ್ನು ಬರುವ ದಿನಗಳನ್ನು ಸರಿದೂಗಿಸಿಕೊಂಡು ಸುಸಜ್ಜಿತ ಬಸ್ ನಿಲ್ದಾಣವನ್ನು ಒಂದು ವರ್ಷದೊಳಿಗೆ ನಿರ್ಮಿಸಲಾಗುವುದು ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಡಿಸಿಎಂ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅನುದಾನದಲ್ಲಿ ಮುಧೋಳ, ಕೊಪ್ಪಳ, ಅಥಣಿ ಮತ್ತು ಸವದತ್ತಿಯಲ್ಲಿ ವಾಹನ ಚಾಲನಾ ತರಬೇತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಕರ್ನಾಟಕ ಸಾರಿಗೆ ಸಂಸ್ಥೆಗೆ 60 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದ್ದು, ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶೀಘ್ರವಾಗಿ ಮುಧೋಳದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ 45 ಸಾವಿರ ಜನರಿಗೆ ಆಶ್ರಯ ನೀಡಲಾಗಿದೆ. ಬೇರೆ ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲಾಗಿದೆ. ಆದರೆ ಕರ್ನಾಟಕ ಸರ್ಕಾರ ಪೂರ್ಣ ಪ್ರಮಾಣದಲ್ಲಿ ವೇತನ ನೀಡುತ್ತಿದೆ. ಕೇಂದ್ರ ಸರ್ಕಾರವೂ ಅತ್ಯುತ್ತಮವಾಗಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

    ರನ್ನ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ, ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಪಂ ಸದಸ್ಯ ಭೀಮನಗೌಡ ಪಾಟೀಲ, ಎಂಎಲ್‌ಸಿ ಹನುಮಂತ ನಿರಾಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಎಚ್. ಪಂಚಗಾಂವಿ, ಮುಖಂಡ ಗುರುರಾಜ ಕಟ್ಟಿ, ಕೆ.ಆರ್. ಮಾಚಪ್ಪನವರ, ಬಿಜೆಪಿ ಅಧ್ಯಕ್ಷ ಡಾ.ರವಿ ನಂದಗಾಂವ, ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತ ತುಳಸಿಗೇರಿ, ಕುಮಾರ ಹುಲಕುಂದ, ಬಸವರಾಜ ಪಾಟೀಲ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಬಿ.ಎಸ್. ಪಾಟೀಲ, ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಎಸ್‌ಪಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಗಂಗೂಬಾಯಿ ಮಾನಕರ ಮತ್ತಿತರರು ಉಪಸ್ಥಿತರಿದ್ದರು.

    ಕೋವಿಡ್-19 ರ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ಅತ್ಯುತ್ತಮ, ಮಾದರಿಯುತವಾಗಿ ಮುಂಜಾಗ್ರತೆ ಹಾಗೂ ಪರಿಹಾರ ಕಾರ್ಯವನ್ನು ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಚಾಲಕರಿಗೆ, ಆಟೋ ಚಾಲಕರಿಗೆ ಕುಲ ಕಸುಬುದಾರರಿಗೆ, ಹೂ ಬೆಳೆಗಾರರಿಗೆ ಪರಿಹಾರ ನೀಡಲಾಗಿದೆ. ಇದಕ್ಕಾಗಿ 2280 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
    ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts