More

    ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನ

    ಮುಧೋಳ: ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಮಾ.22 ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

    ಸೋಮವಾರ ನಗರದ ತಾಲೂಕು ಆಸ್ಪತ್ರೆಯಲ್ಲಿ ಇಂದ್ರಧನುಷ್ ಲಸಿಕೆ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರ ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನಗೊಳಿಸಿದ್ದು, ೆ.22 ರಿಂದ ಮಾ.22 ರವರೆಗೆ ಈ ಅಭಿಯಾನ ನಡೆಸಲಾಗುವುದು. ಈವರೆಗೆ ತಲುಪಲಾಗದ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಈ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕಾಮನಬಿಲ್ಲಿನಲ್ಲಿ ಏಳು ಬಣ್ಣಗಳಿರುವಂತೇ, ಇಂದ್ರಧನುಷ್ ಡಿಫ್ತೀರಿಯಾ, ವೂಫಿಂಗ್ ಕ್ಾ, ಟೆಟಾನಸ್, ಟ್ಯುಬರ್ ಕ್ಯುಲೋಸಿಸ್, ಪೋಲಿಯೋ, ಮಿಸಲ್ಸ್, ಹೆಪಟೈಟಸ್-ಬಿ ಈ ಏಳು ರೋಗಗಳು ಬಾರದಂತೆ ತಡೆಯುತ್ತದೆ ಎಂದು ಹೇಳಿದರು.

    ಜಿಲ್ಲೆಯಲ್ಲಿ ಈ ಲಸಿಕೆಯನ್ನು ಫೆ.22 ರಿಂದ ಮಾ.22 ರವರೆಗೆ ನೀಡಲಾಗುತ್ತದೆ. ಲಸಿಕೆ ಪಡೆಯುವ ಗರ್ಭಿಣಿಯರ ಸಂಖ್ಯೆ ಜಿಲ್ಲೆಯಲ್ಲಿ 76 ಹಾಗೂ ಲಸಿಕೆ ಪಡೆಯದ 2 ವರ್ಷದೊಳಗಿನ 357 ಮಕ್ಕಳು ಇದ್ದು, ಅವರಿಗೆ ಲಸಿಕೆ ನೀಡಲಾಗುವುದು. ನಮ್ಮ ತಾಲೂಕಿನಲ್ಲಿ 8 ಲಸಿಕೆ ಕೇಂದ್ರದಲ್ಲಿ 7 ಜನ ಗರ್ಭಿಣಿಯರು ಹಾಗೂ 64 ಮಕ್ಕಳಿಗೆ ನೀಡಲಾಗುತ್ತಿದೆ ಎಂದರು.

    ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಡಾ.ರವಿ ನಂದಗಾಂವ, ಪ್ರಧಾನ ಕಾರ್ಯದರ್ಶಿ ಕುಮಾರ ಹುಲಕುಂದ, ಕೆ.ಆರ್. ಮಾಚಪ್ಪನವರ, ನಗರಸಭೆ ಅಧ್ಯಕ್ಷ ಸಂಜೀವ ಮಾನೆ, ತಾಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ ಮಲಘಾಣ, ವೈದ್ಯಾಧಿಕಾರಿ ಬಸವರಾಜ ಪಾಟೀಲ ಇತರರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts