23.9 C
Bangalore
Friday, December 6, 2019

ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಅವಕಾಶ

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಮುಧೋಳ: ಪತ್ರಿಕೋದ್ಯಮ ಹಾಗೂ ಇತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಅವಕಾಶವಿದ್ದು, ಸಮರ್ಪಕವಾಗಿ ಬಳಸಿಕೊಂಡು ತಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕೆಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಓಂಕಾರ ಕಾಕಡೆ ಹೇಳಿದರು.

ಬಾಗಲಕೋಟೆ ಬಿ.ವ್ಹಿ.ವ್ಹಿ ಸಂಘದ ಪಟ್ಟಣದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಅಡಿ ಕಾಲೇಜಿನ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಅವಕಾಶಗಳು ಕುರಿತು ಅವರು ಮಾತನಾಡಿದರು.

ವಿಶ್ವದಲ್ಲಿ ಆಹಾರ, ಕೃಷಿಗೆ ಇರುವಷ್ಟೆ ಪ್ರಾಮುಖ್ಯತೆ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಶಿಕ್ಷಣಕ್ಕೆ ಇದೆ ಎಂದು ಹೇಳುವುದು ಉತ್ಪ್ರೇಕ್ಷೆ ಅಲ್ಲ. ವಿಶ್ವದ ಶೇ.96 ರಷ್ಟು ಜನ ಒಂದಲ್ಲ ಒಂದು ಮಾಧ್ಯಮದ ಕಕ್ಷೆಯಲ್ಲಿ ಬರುತ್ತೇವೆ. ನಾವು ಇಷ್ಟ ಪಟ್ಟು ಮಾಡುವ ಕೆಲಸ,ಪಡೆಯವ ಶಿಕ್ಷಣ ನಮ್ಮನ್ನು ಎಂದೂ ಕೈಬಿಡುವುದಿಲ್ಲ. ನನಗೆ ಇಂಗ್ಲಿಷ್ ಭಾಷೆ ಬರುವುದಿಲ್ಲ ಎಂಬುದರ ಬಗ್ಗೆ ಕೀಳರಿಮೆ ಬೇಡ. ಅದನ್ನು ನಮ್ಮ ವಶವಾಗಿಸಲು ಏನು ಮಾಡಬೇಕೆಂಬುದನ್ನು ಅರಿತು ಆ ಸಾಧನೆ ಮಾಡಬೇಕು ಎಂದರು.

ಪ್ರಾಚಾರ್ಯ ಡಾ.ಎನ್.ಬಿ. ಇಂಗನಾಳ ಅಧ್ಯಕ್ಷತೆವಹಿಸಿ ಮಾತನಾಡಿ, ಉನ್ನತ ಮೌಲ್ಯಾಧಾರಿತ ಶಿಕ್ಷಣ ನೀಡಲು ಬಿವ್ಹಿವ್ಹಿ ಸಂಘವು ಅಪಾರ ಸೌಲಭ್ಯಗಳನ್ನು ನೀಡುವುದರ ಮೂಲಕ ವಿದ್ಯಾಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮವನ್ನು ಸಮರ್ಥವಾಗಿ ಬಳಸಿಕೊಂಡು ಮುಂದೆ ಬರುತ್ತಿರುವುದನ್ನು ನೋಡಿದರೆ ಹೆಮ್ಮೆಯಾಗುತ್ತದೆ ಎಂದರು.

ಪತ್ರಕರ್ತ ಉದಯ ಎಸ್.ಕುಲಕರ್ಣಿ ಹಾಗೂ ಗಣಪತಿರಾವ್ ಎಸ್.ಮಾನೆ ಮಾತನಾಡಿದರು. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ವಿಶ್ವನಾಥ ಮುನವಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಓಂಕಾರ ಕಾಕಡೆ ಅವರ ಪತ್ನಿ ಸಕ್ಕೂಬಾಯಿ ಕಾಕಡೆ ಇದ್ದರು.

ಪ್ರೊ.ಆರ್.ಆರ್.ಮಾಲಿಪಾಟೀಲ ನಿರೂಪಿಸಿದರು. ಪ್ರೊ.ಸತೀಶ ಸಾರವಾಡ ವಂದಿಸಿದರು. ಶಿಲ್ಪಾ ಮೀಶಿ ಪ್ರಾರ್ಥಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ಯಾವುದೇ ಪದವಿ ಪಡೆದ ವಿದ್ಯಾರ್ಥಿಗಳು ತಾವು ತೆಗೆದುಕೊಂಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ಪ್ರವೇಶಕ್ಕೆ ಅವಕಾಶ ಸಿಗಲಿಲ್ಲ ಎಂದು ನಿರಾಸೆ ಹೊಂದದೆ, ಪತ್ರಿಕೋದ್ಯಮ ವಿಭಾಗದಲ್ಲಿ ಪ್ರವೇಶ ಪಡೆದರೆ ಸಾಕಷ್ಟು ಅವಕಾಶಗಳಿವೆ. ಪತ್ರಿಕೋದ್ಯಮ ವಿಷಯ ಕಲಿತವರಿಗಷ್ಟೇ ಅಲ್ಲ ಯಾವುದೇ ವಿಭಾಗದ ಪದವಿದರರಿಗೂ ಪತ್ರಿಕಾ ರಂಗದಲ್ಲಿ ಅವಕಾಶಗಳಿವೆ.
ಡಾ.ಓಂಕಾರ ಕಾಕಡೆ, ಮಹಿಳಾ ವಿವಿ ಪತ್ರಿಕೋದ್ಯಮ, ಸಮೂಹ ಸಂವಹನ ವಿಭಾಗದ ಮುಖ್ಯಸ್ಥ

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...