ಮುಧೋಳದಲ್ಲಿ ಅ.1ರಂದು ಕಬ್ಬು ಬೆಳೆಗಾರರ ಬೃಹತ್ ಸಮಾವೇಶ

ಮುಗಳಖೋಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ಅಕ್ಟೋಬರ್ 1ರಂದು ಮುಧೋಳ ಬಸವೇಶ್ವರ ಸರ್ಕಲ್‌ನಲ್ಲಿ ಕಬ್ಬು ಬೆಳೆಗಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 11:00 ಗಂಟೆಗೆ ಸಮಾವೇಶ ನಡೆಯಲಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವ ವಹಿಸುವರು.

ಮಹಾರಾಷ್ಟ್ರದ ಸಂಸದ ಹಾಗೂ ಶೇತ್ಕರಿ ಸಂಘಟನೆಯ ರಾಜಾಧ್ಯಕ್ಷ ರಾಜು ಶೆಟ್ಟಿ ನೇತೃತ್ವದಲ್ಲಿ ನಿರ್ಣಯ ಮಂಡಿಸಲಾಗುವುದು. ರೈತರು ಹಾಗೂ ಕಬ್ಬು ಬೆಳೆಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.