More

    ನ್ಯಾಯ ಸಿಗದಿದ್ದಲ್ಲಿ ಬೃಹತ್ ಹೋರಾಟ

    ಮುಧೋಳ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಧೋಳ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಹಾಗೂ ಎಲ್ಲ ಕಾಂಗ್ರೆಸ್ ಘಟಕಗಳಿಂದ ಯಾದವಾಡ ವೃತ್ತದಲ್ಲಿ ಬೆಳಗಾವಿ-ವಿಜಯಪುರ ರಾಜ್ಯ ಹೆದ್ದಾರಿ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಲಾಯಿತು.

    ನಂತರ ತಹಸೀಲ್ದಾರ್ ಸಂಗಮೇಶ ಬಾಡಗಿ ಮುಖಾಂತರ ರಾಜ್ಯಪಾಲರಿಗೆ ಎಂಎಲ್‌ಸಿ ಆರ್.ಬಿ.ತಿಮ್ಮಾಪುರ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಸತೀಶ ಬಂಡಿವಡ್ಡರ, ಶಿವಕುಮಾರ ಮಲಘಾಣ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

    ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಗರದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿದೆ. ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದು, ಬೈಪಾಸ್ ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಉಪಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು. ಕ್ಷೇತ್ರದವರೆ ಉಪ ಮುಖ್ಯಮಂತ್ರಿ ಆಗಿದ್ದರೂ ಸಹಕಾರ ರಂಗದ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಲು ಮುಂದಾಗುತ್ತಿರುವುದು ಶೋಚನೀಯ. ತಮ್ಮ ಪ್ರಭಾವ ಬಳಸಿ ಕಾರ್ಖಾನೆ ಉಳಿಸಿ, ರೈತರ ಹಿತ ಕಾಯಬೇಕು. 15 ದಿನಗಳಲ್ಲಿ ಸೂಕ್ತ ನ್ಯಾಯ ಸಿಗದಿದ್ದರೆ ಮುಧೋಳದಲ್ಲಿ ಎಲ್ಲ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲಾ ಕಾಂಗ್ರೆಸ್ ಘಟಕ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಮಳೆ ಹಾನಿ, ಪ್ರವಾಹ ಪರಿಹಾರ ನೀಡದೆ ಸರ್ಕಾರ ಬಡವರ ಕಣ್ಣಿಗೆ ಮಣ್ಣು ಹಾಕುವ ಕಾರ್ಯ ಮಾಡುತ್ತಿದೆ. ಬಿದ್ದ ಮನೆಗಳಿಗೆ ಸೂಕ್ತ ಪರಿಹಾರ ನೀಡದೆ ವಂಚಿಸುತ್ತಿದ್ದು, ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕಾರ್ಯ ಮಾಡುತ್ತಿದ್ದಾರೆ ಹಾಗೂ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ನೀಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

    ಮಾಜಿ ಜಿಪಂ ಅಧ್ಯಕ್ಷ ಶಿವಕುಮಾರ ಮಲಘಾಣ ಮಾತನಾಡಿ, ತಾಲೂಕಿನಲ್ಲಿ ಮನೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಲಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಹೇಳಿದರು.

    ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ನಾಯಕ, ನಗರ ಬ್ಲಾಕ್ ಅಧ್ಯಕ್ಷ ದಾನೇಶ ತಡಸಲೂರ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕಣ್ಣ ಕೊಪ್ಪದ, ಉದಯಸಿಂಹ ಪಡತಾರೆ, ವಿನಯ ತಿಮ್ಮಾಪುರ, ಜಿಪಂ ಸದಸ್ಯ ಮಹಾಂತೇಶ ಉದಪುಡಿ, ಶಿಶಿರ ಮಲಘಾಣ, ಶಿವಾನಂದ ಡಂಗಿ, ಎನ್.ಟಿ.ಹುಗ್ಗಿ, ಸೀಶ ಮಲಘಾಣ, ದುಂಡಪ್ಪ ಲಿಂಗರಡ್ಡಿ, ಹನುಮಂತಗೌಡ ಪಾಟೀಲ, ಹನುಮಂತ ಅಡವಿ, ಕಾಶಿನಾಥ ಹುಡೇದ, ರಜಮಾ ಬೇಪಾರಿ, ಶೋಭಾ ಜಿಗಜಿನ್ನಿ, ವಿಜಯಲಕ್ಷ್ಮೀ ಮೂಲಿಮನಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts