More

    ಟಿಕೆಟ್​ ಸಿಗದಿದ್ದಕ್ಕೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ರಾಜೀನಾಮೆ

    ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಇಂದು (ಏಪ್ರಿಲ್​ 13) ರಾಜೀನಾಮೆ ನೀಡಿದ್ದಾರೆ.

    ಪಕ್ಷದ ಮೇಲಿನ ಬೆಳವಣಿಗೆಗಳಿಂದ ಬೇಸತ್ತು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೇಕಾಗಿ ವಿನಂತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದನ್ನೂ ಓದಿ: ಜಾನಪದ ಗಾಯಕಿ ಮೇಲೆ ನೋಟಿನ ಸುರಿಮಳೆ: ಸಂಗ್ರಹವಾದ ಒಟ್ಟು ಮೊತ್ತ ಕೇಳಿದ್ರೆ ದಂಗಾಗ್ತೀರಾ!

    BJP MLA M.P. Kumaraswamy resigns

    ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ
    ಫೇಸ್​ಬುಕ್​ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ಸಂದೇಶ ನೀಡಿರುವ ಕುಮಾರಸ್ವಾಮಿ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಕ್ಷೇತ್ರದ ಎಲ್ಲ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್​ಗೆ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ! ಸರ್ವೆ ಆಧರಿಸಿ ಟಿಕೆಟ್ ನೀಡುವ ಪಕ್ಷದ ಪ್ರತಿ ಸರ್ವೆಯಲ್ಲಿ ಮುನ್ನಡೆಯಿದ್ದರೂ ಟಿಕೆಟ್ ನಿರಾಕರಿಸಿದ್ದು ನೋವಿನ ವಿಚಾರ. ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತ ಬಾಂಧವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈಕಮಾಂಡ್​ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ!

    ನನ್ನ ಮನೆಯವರನ್ನಲ್ಲ
    ನಿಮಗೆಲ್ಲ ತಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನ ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ. ಪಕ್ಷದ ಕಾರ್ಯಕರ್ತರನ್ನು ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲ. ಯೋಚಿಸುವ ಶಕ್ತಿ ನಿಮ್ಮಲ್ಲಿದೆ. ನನಗೆ ಶಕ್ತಿ ತುಂಬುವ ಕೈಗಳು ನೀವು. ಇನ್ನು ಮುಂದೆಯೂ ನಿಮ್ಮೊಂದಿಗೆ ಸದಾ ಜೊತೆಯಲ್ಲಿರುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ ಎಂದು ಕುಮಾರಸ್ವಾಮಿ ಫೇಸ್​ಬುಕ್​ನಲ್ಲಿ ಕೇಳಿಕೊಂಡಿದ್ದಾರೆ.

    ಇದನ್ನೂ ಓದಿ: ವಿಜಯವಾಣಿ ವಿಶೇಷ | ಬ್ಯಾಂಕ್​ಗಳಲ್ಲಿ ಅಕ್ರಮದ ಭಂಡಾರ; ಲಾಕರ್​ಗಳಲ್ಲೇ ಕಂತೆಕಂತೆ ನೋಟು! ಸಹಕಾರಿ ಬ್ಯಾಂಕ್​ಗಳ ಮೇಲೆ ಐಟಿ ದಾಳಿ ಪ್ರಕರಣ

    ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ಮೊದಲ ಪಟ್ಟಿಯಲ್ಲಿ 189 ಮತ್ತು ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದೆ. ಇನ್ನು 12 ಅಭ್ಯರ್ಥಿಗಳ ಪಟ್ಟಿ ಬಾಕಿ ಇದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 224 ಸ್ಥಾನಗಳನ್ನು ಹೊಂದಿರುವ ಕರ್ನಾಟಕ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 113 ಬಹುಮತ ಬೇಕಾಗಿದೆ. (ದಿಗ್ವಿಜಯ ನ್ಯೂಸ್​)

    ನಾಳೆ ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಆಗುತ್ತಾ?

    ಚುನಾವಣೆ ಹಿನ್ನೆಲೆ ವಾಹನ ತಪಾಸಣೆ ಮಾಡದೇ ಸುಮ್ಮನೆ ಕೂತಿರುವ ಪೊಲೀಸರ ಮೇಲೆ ಕಮಿಷನರ್ ಗರಂ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts