18 C
Bangalore
Thursday, December 5, 2019

ಕೃಷಿ ಭೂಮಿ ಪರಿವರ್ತನೆ ಸರಳೀಕರಣ: ಮೂಡುಬಿದಿರೆ ತಾಲೂಕು ಉದ್ಘಾಟಿಸಿ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಮೂಡುಬಿದಿರೆ: ಕೃಷಿ ಭೂಮಿ ಪರಿವರ್ತನೆ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಸರಳೀಕರಣ ಮಾಡಿರುವುದು ದೇಶದಲ್ಲೇ ರಾಜ್ಯದ ಮೊದಲ ಹೆಜ್ಜೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿನ ಪದ್ಮಾವತಿ ಕಲಾ ಮಂದಿರದಲ್ಲಿ ಮೂಡುಬಿದಿರೆ ತಾಲೂಕು ಉದ್ಘಾಟಿಸಿ ಮಾತನಾಡಿದರು. ಇದಕ್ಕೂ ಮೊದಲು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಿನಿವಿಧಾನ ಸೌಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

94ಸಿ, 94ಸಿಸಿ ಅರ್ಜಿ ಹಾಕಲು ಮಾರ್ಚ್ 31ರವರೆಗೆ ಅವಕಾಶ ವಿಸ್ತರಿಸಲಾಗಿದೆ. ಬಗರ್‌ಹುಕುಂನಲ್ಲಿ ಫಾರ್ಮ್ 50, 53ಕ್ಕೆ 2020ರ ಏ.20ರವರೆಗೆ ಅವಕಾಶವಿದೆ. ಫಾರ್ಮ್57, 58ರ ಪ್ರಕರಣಗಳ ಅರ್ಜಿಗೆ ಮಾರ್ಚ್ 16ರವರೆಗೆ ಅವಕಾಶವಿದೆ. ಬಗರ್‌ಹುಕುಂ ಭೂಮಿಯನ್ನು 25 ವರ್ಷಗಳ ಬಳಿಕ ಪರಾಧೀನಕ್ಕೆ ಅವಕಾಶ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದರು.

ಇಲ್ಲಿನ ಮಿನಿವಿಧಾನ ಸೌಧಕ್ಕೆ ಈಗಾಗಲೇ 10 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ತಾಲೂಕು ಉದ್ಘಾಟಿಸುತ್ತಿದ್ದೇನೆ. ಮೂಡುಬಿದಿರೆ, ಮೂಲ್ಕಿ ತಾಲೂಕುಗಳು ರಾಜ್ಯಕ್ಕೆ ಮಾದರಿಯಾಗಿ ಮೂಡಿಬರಲಿ ಎಂದ ಅವರು, ಹೌಸಿಂಗ್ ಬೋರ್ಡ್ ಮೂಲಕ ನಡೆಯುವ ಈ ಕಾಮಗಾರಿಗೆ ತಕ್ಷಣ ಟೆಂಡರ್ ಕರೆದು ಪಾರದರ್ಶಕ, ಗುಣಮಟ್ಟದ ಕೆಲಸ ನಡೆಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಮೂಡುಬಿದಿರೆ ಶಾಸಕ ಎ.ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವರು, ತಾಲೂಕು ರಚನೆಗಾಗಿ ಶ್ರಮಿಸಿದ ಮಾಜಿ ಸಚಿವರಾದ ಕೆ.ಅಮರನಾಥ ಶೆಟ್ಟಿ ಹಾಗೂ ಕೆ.ಅಭಯಚಂದ್ರ ಜೈನ್‌ರನ್ನು ಸನ್ಮಾನಿಸಲಾಯಿತು.

ಮುಖ್ಯಮಂತ್ರಿಯವರ ಸಂಸದೀಯ (ಕಂದಾಯ) ಕಾರ್ಯದರ್ಶಿ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ತಾಪಂ ಅಧ್ಯಕ್ಷ ಮಹಮ್ಮದ್ ಮೋನು, ಜಿ.ಪಂ. ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಜಿಲ್ಲಾಧಿಕಾರಿ ಎಸ್.ಸಸಿಕಾಂತ ಸೆಂಥಿಲ್ ಉಪಸ್ಥಿತರಿದ್ದರು.
ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಸ್ವಾಗತಿಸಿದರು. ತಹಸೀಲ್ದಾರ್ ಸುದರ್ಶನ ಬಿ.ಕೆ. ಅತಿಥಿಗಳನ್ನು ಗೌರವಿಸಿ ವಂದಿಸಿದರು. ಅಂಡಾರು ಗುಣಪಾಲ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಆರಂಭದಲ್ಲಿ ಜೈನ್ ಹೈಸ್ಕೂಲ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಹಕ್ಕುಪತ್ರ, ಪಿಂಚಣಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳ ವಿತರಣೆ ನಡೆಯಿತು.

ಧರ್ಮಸ್ಥಳ ತಾಲೂಕು ಘೋಷಣೆಗೆ ಮನವಿ: ಬೆಳ್ತಂಗಡಿ ತಾಲೂಕಿನ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಧರ್ಮಸ್ಥಳವನ್ನೂ ತಾಲೂಕಾಗಿ ಘೋಷಿಸುವಂತೆ ಕಂದಾಯ ಸಚಿವರನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ವಿನಂತಿಸಿದರು. ಜಿಲ್ಲೆಯಲ್ಲಿ ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕು ರಚನೆಯಿಂದ ಮಂಗಳೂರು ತಾಲೂಕಿನ ಒತ್ತಡ ಇಳಿದಂತಾಗಿದೆ. ಯೋಜಿತ ಬದ್ಧತೆಯಿಂದ ಪರಂಪರೆಯ ಮೂಡುಬಿದಿರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ದೂರದರ್ಶಿತ್ವದಿಂದ ಮೂಡುಬಿದಿರೆಯಲ್ಲಿ ಆಡಳಿತಾತ್ಮಕ ಕಚೇರಿಗಳನ್ನು ಯೋಜಿಸಿ ಬೆಳೆಸಬೇಕಾಗಿದೆ ಎಂದರು.

ಕೋಟ್ಯಾನ್ ಗರಂ: ತನ್ನ ಕ್ಷೇತ್ರದಲ್ಲಿ ಬೆಳಗ್ಗೆ ನಡೆದ ರಸ್ತೆ ಉದ್ಘಾಟನೆಯೊಂದಕ್ಕೆ ಕಂದಾಯ ಸಚಿವರಿದ್ದು, ಶಾಸಕನಾದ ತನ್ನನ್ನು ಆಹ್ವಾನಿಸಿಲ್ಲ ಎಂದ ಶಾಸಕ ಕೋಟ್ಯಾನ್, ಈ ಬಗ್ಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ಬಗ್ಗೆ ವೇದಿಕೆಯಲ್ಲೇ ಅಸಮಾಧಾನ ವ್ಯಕ್ತಪಡಿಸಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...