ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

New Project (11)
Published on

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಪಂಚಮಿ ಅಂಗವಾಗಿ ಶುಕ್ರವಾರದಂದು ಶ್ರೀಶಾಸ್ತಾವು ದೇವರಿಗೆ ವಿಶೇಷ ಪೂಜೆ, ಶ್ರೀ ನಾಗ ದೇವರಿಗೆ ಫಲಪಂಚಾಮೃತ ಅಭಿಷೇಕ, ನಾಗತಂಬಿಲ, ಗಣಪತಿ ಹೋಮ ಶ್ರೀ ಸುಬ್ರಹ್ಮಣ್ಯ ದೇವರಿಗೆ ಫಲಪಂಚಾಮೃತ ಅಭಿಷೇಕ, ಪವಮಾನ ಸೂಕ್ತ ಅಭಿಷೇಕ, ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ, ಮಹಾಮಂಗಳಾರತಿ ನಡೆಯಿತು.

ಸಜೀಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಶ್ರೀತ್ತಾಯ, ಮೆಸ್ಕಾಂ ಎಇಇ ನಾರಾಯಣ ಭಟ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಎಂ.ಕೆ.ಶಿವ, ಹರಿಪ್ರಸಾದ್ ಭಂಡಾರಿ, ಶ್ರೀನಿವಾಸ್ ನಾಯಕ್, ರಾಜು ಪೂಜಾರಿ, ಚಿತ್ರ ಎಸ್.ರೈ. ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net