

ಬಂಟ್ವಾಳ: ವೀರಕಂಭ ಗ್ರಾಮದ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎನ್‌ಎಂಪಿಟಿ ಸಂಸ್ಥೆಯ ಸಿಎಸ್‌ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಮುಹೂರ್ತ ಸೋಮವಾರ ಜರುಗಿತು.
ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ಅವರಿಗೆ ಕಟ್ಟಡ ನಿರ್ಮಾಣ ಕಾಮಗಾರಿ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರಾದ ಸುಧಾಕರ, ಗೋಪಾಲಕೃಷ್ಣ ಭಟ್, ವಿಶ್ವನಾಥ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡಿ, ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಮೊದಲಾದವರಿದ್ದರು.