More

    ಮುಖೇಶ್ ಅಂಬಾನಿಗೆ ಮೂರನೇ ಬಾರಿಗೆ ಜೀವ ಬೆದರಿಕೆ; 400 ಕೋಟಿ ರೂ. ಬೇಡಿಕೆ


    ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಅಧ್ಯಕ್ಷ ಮುಖೇಶ್ ಅಂಬಾನಿಗೆ ಕಳೆದ 4 ದಿನಗಳಿಂದ ಒಂದೇ ಇಮೇಲ್ ಮೂಲಕವಾಗಿ ಕೊಲೆ ಬೆದರಿಕೆಗಳು ಬರುತ್ತಿವೆ. ಮೂರನೇ ಬಾರಿಗೆ ಜೀವ ಬೆದರಿಕೆ ಬಂದಿದ್ದು, 400 ಕೋಟಿ ರೂಪಾಯಿಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.



    ಅಕ್ಟೋಬರ್‌ 27 ರಂದು 200 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್‌ ಪತ್ರ ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಅಕ್ಟೋಬರ್‌ 28 ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು 200 ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ. ಈ ಬಾರಿ ಬೇಡಿಕೆ ಮೊತ್ತವನ್ನು 400 ಕೋಟಿಗೆ ಹೆಚ್ಚಿಸಲಾಗಿದೆ.


    ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್‌ ನಿಮ್ಮನ್ನು ಕೊಲ್ಲುತ್ತಾನೆ. ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ. ಈ ಬಾರಿ ನಮ್ಮನ್ನು ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ.


    ಮುಂಬೈನ ಗಾಮ್‌ದೇವಿ ಪೊಲೀಸ್ ಠಾಣೆಯು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 387 (ಸಾವಿನ ಭಯ ಅಥವಾ ಸುಲಿಗೆ ಮಾಡುವ ಸಲುವಾಗಿ ವ್ಯಕ್ತಿಯನ್ನು ಘೋರವಾಗಿ ಗಾಯಗೊಳಿಸುವುದು) ಮತ್ತು 506 (2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ. 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts