More

    ‘ಮುಖವಾಡ ಇಲ್ಲದವನು’ ಟ್ರೇಲರ್​ ಹೊತ್ತು ಬಂದ

    ಬೆಂಗಳೂರು: ‘ಮುಖವಾಡ ಇಲ್ಲದವನು 84’. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸುವ ಈ ಚಿತ್ರದ ಟ್ರೇಲರ್​ ಲಾಂಚ್​ ಬಿಡುಗಡೆ ಕಾರ್ಯಕ್ರಮ ಸೋಮವಾರ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು. ಈ ಹೊಸಬರ ತಂಡದ ಶ್ರಮಕ್ಕೆ ನಿರ್ದೇಶಕ ರವಿ ಶ್ರೀವತ್ಸ ಮತ್ತು ವೇಣುಗೋಪಾಲ್​ ಅತಿಥಿಯಾಗಿ ಆಗಮಿಸಿ ಟ್ರೇಲರ್​ ಲಾಂಚ್​ ಮಾಡಿದರು.

    ಇದನ್ನೂ ಓದಿ: ಸಲೂನ್ ಗರ್ಲ್ ಕಾರುಣ್ಯಾ ರಾಮ್; ಪೆಟ್ರೋಮ್ಯಾಕ್ಸ್​ನಲ್ಲಿ ವಿಶೇಷ ಪಾತ್ರ..

    ಗಣಪತಿ ಪಾಟೀಲ್​ ಬೆಳಗಾವಿ ‘ಮುಖವಾಡ ಇಲ್ಲದವನು 84’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವೃತ್ತಿಯಲ್ಲಿ ಮೆಡಿಕಲ್​ ಕೆಲಸದಲ್ಲಿದ್ದು, ದೂರದ ನ್ಯೂಜಿಲೆಂಡ್​ನಲ್ಲಿ ವಾಸವಾಗಿದ್ದಾರೆ. ತುಂಬ ವರ್ಷಗಳಿಂದಲೂ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕು ಎಂದೆನಿಸಿದಾಗ ‘ಮುಖವಾಡ ಇಲ್ಲದವನು 84’ ಚಿತ್ರದ ಮೂಲಕ ಆಗಮಿಸಿದ್ದಾರೆ. ಇದೀಗ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಇಡೀ ತಂಡ, ಬಿಡುಗಡೆಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ‘ಮುಖವಾಡ ಇಲ್ಲದವನು’ ಟ್ರೇಲರ್​ ಹೊತ್ತು ಬಂದ

    ಚಿತ್ರದ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕರು, ಎರಡು ವರ್ಷದ ಹಿಂದೆ ಶಿವಕುಮಾರ್ ಪರಿಚಯ. ಸಿನಿಮಾ ಮಾಡುವ ಬಗ್ಗೆ ನಿರ್ಧಾರ ಅಂತಿಮವಾಗುತ್ತಿದ್ದಂತೆ, ಒಂದೇ ವಾರದಲ್ಲಿ ಶೂಟಿಂಗ್​ ತಯಾರಿ ನಡೆಸಿ 40 ದಿನದಲ್ಲಿ ಚಿತ್ರೀಕರಣವನ್ನೂ ಮುಗಿಸಿದೆವು. ತುಂಬ ವಿಭಿನ್ನ ಶೈಲಿಯ ಸಿನಿಮಾ ಇದು. ಡೈಲಾಗ್​ಗಳಲ್ಲಿ ತುಂಬ ಅರ್ಥವಿದೆ‘ ಎಂದರು.

    ಇದನ್ನೂ ಓದಿ: ಸಂಜನಾ, ರಾಗಿಣಿಗೆ ಸಿಗುತ್ತಾ ಬೇಲ್?

    ಚಿತ್ರದಲ್ಲಿ ಶಿವಕುಮಾರ್ ಕಡೂರು ನಿರ್ದೇಶನದ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಈ ಮೊದಲು ಡ್ರೆಸ್​ ಕೋಡ್​ ಚಿತ್ರ ಮಾಡಿದ ಅನುಭವ ಅವರಿಗಿದೆ. ‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಆಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂಬುದು ನಿರ್ದೇಶಕರ ಮಾತು.

    ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್​ ಮತ್ತು ಹರೀಶ್​ ಸಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ದುರ್ಗಾ ಪ್ರಸಾದ್​ ಸಂಗೀತ, ಡಾ. ಮಹಾರಾಜಾ ಹಿನ್ನೆಲೆ ಸಂಗೀತ, ಮಧು ಆರ್ಯ ಕ್ಯಾಮರಾ ಜವಾಬ್ದಾರಿ ನಿಭಾಯಿಸಿದರೆ, ಕಥೆ, ಚಿತ್ರಕತೆ ಸಂಭಾಷಣೆ ಮತ್ತು ನಿರ್ದೇಶನವನ್ನು ಶಿವಕುಮಾರ್ ಮಾಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮಾಣ ಪತ್ರ ಪಡೆದುಕೊಂಡಿರುವ ಈ ಸಿನಿಮಾ ಡಿಸೆಂಬರ್​ ವೇಳೆಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದು.

    ಕೋಮಲ್​ ಹೊಸ ಸಿನಿಮಾ ಹೆಸರು 2020; ಹಳೇ ಕಾಮಿಡಿ ಲಯಕ್ಕೆ ಮರಳಿದ ನಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts