

ಕೊಕ್ಕರ್ಣೆ: ನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದೂರು ಪೇಟೆ ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ಶುಕ್ರವಾರ ಅರಣ್ಯ ಇಲಾಖೆಯ ಸಹಕಾರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ತೆರವುಗೊಳಿಸಲಾಯಿತು.
ಇಲ್ಲಿನ ಅಪಾಯಕಾರಿ ಮರದ ಕುರಿತು ವಿಜಯವಾಣಿ ಜುಲೈ 8ರಂದು ವರದಿ ಪ್ರಕಟಿಸಿದ್ದು, ಇದರಿಂದ ಎಚ್ಚೆತ್ತ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಈ ವೃಕ್ಷದ ಸಮೀಪ ಹೈವೋಲ್ಟೇಜ್ ವಿದ್ಯುತ್ ತಂತಿಗಳು ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರ ಹಾಗೂ ಜನ ಸಂಚಾರ ಹೊಂದಿದ್ದರಿಂದ ಮರ ಉರುಳುವ ಭೀತಿ ಇತ್ತು.