More

    ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ತೀವ್ರ ಅಸ್ವಸ್ಥ; ಐಸಿಯುನಲ್ಲಿ ಹಿರಿಯ ವೈದ್ಯರ ನಿಗಾದಲ್ಲಿ ಚಿಕಿತ್ಸೆ

    ಉತ್ತರಪ್ರದೇಶ: ಇಲ್ಲಿನ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ತೀರಾ ಬಿಗಡಾಯಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    82 ವರ್ಷದ ಇವರು ಈ ವರ್ಷದ ಜೂನ್​ನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಗುರುಗ್ರಾಮದ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೆ ಎಂದು ಇವರು ಆಗಮಿಸಿದ್ದು, ನಂತರ ಇದ್ದಕ್ಕಿದ್ದಂತೆ ಆರೋಗ್ಯ ಕೈಕೊಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಈಗ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ಹಿರಿಯ ವೈದ್ಯರ ತಂಡ ನಿಗಾ ವಹಿಸಿ, ಚಿಕಿತ್ಸೆ ನೀಡುತ್ತಿದೆ. ಪುತ್ರ ಅಖಿಲೇಶ್ ಯಾದವ್ ಆಸ್ಪತ್ರೆಯತ್ತ ಧಾವಿಸಿದ್ದು, ತಂದೆಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

    ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts