25.9 C
Bengaluru
Wednesday, January 22, 2020

ಅಪಘಾತ ತಾಣ ಮುಳ್ಳಿಕಟ್ಟೆ ಜಂಕ್ಷನ್

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಗಂಗೊಳ್ಳಿ: ಕುಂದಾಪುರ ತಾಲೂಕಿನ ಹೊಸಾಡು ಮುಳ್ಳಿಕಟ್ಟೆ ಜಂಕ್ಷನ್ ಅಪಘಾತ ತಾಣವಾಗಿ ಮಾರ್ಪಟ್ಟಿದ್ದು, ಈ ಪ್ರದೇಶದಲ್ಲಿ ತುರ್ತು ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಮುಳ್ಳಿಕಟ್ಟೆ ಬಸ್ ನಿಲ್ದಾಣ ರಾಷ್ಟ್ರೀಯ ಹೆದ್ದಾರಿ 66ಕ್ಕೆ ತಾಗಿಕೊಂಡೇ ಇದ್ದು ಇಲ್ಲಿ ಪ್ರತಿನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತಿರುತ್ತವೆ. ಈ ಪ್ರದೇಶದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ಕಡೆ ಗಂಗೊಳ್ಳಿ ಕಡೆ ಹೋಗುವ ರಸ್ತೆ ಇನ್ನೊಂದು ಕಡೆ ನಾಡಾ-ಗುಡ್ಡೆಯಂಗಡಿ ರಸ್ತೆ ನೇರವಾಗಿ ಸಂಧಿಸುತ್ತದೆ. ಇಲ್ಲಿ ದಿನನಿತ್ಯ ನೂರಾರು ವಾಹನಗಳು ಸಾಗಿ ಬಂದು ರಾಷ್ಟ್ರೀಯ ಹೆದ್ದಾರಿ ಮೂಲಕವೇ ಸಂಚರಿಸುತ್ತವೆ. ಮುಳ್ಳಿಕಟ್ಟೆ ಬಸ್ ನಿಲ್ದಾಣದಲ್ಲಿ ಬಹುತೇಕ ಎಲ್ಲ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಿ, ಇಳಿಸಿ ಸಾಗುವುದರಿಂದ ಸ್ವಲ್ಪ ಹೊತ್ತು ನಿಲ್ಲುತ್ತವೆ. ಸಾರ್ವಜನಿಕರು ಬಸ್ ಹತ್ತಿ ಇಳಿಯಲು ಇದೇ ನಿಲ್ದಾಣವನ್ನು ಆಶ್ರಯಿಸಿದ್ದಾರೆ. ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ವಾಹನಗಳು ರಸ್ತೆಗಳ ಎಡಬಲಗಳಲ್ಲಿ ಸಂಚರಿಸುತ್ತಲೇ ಇರುವುದರಿಂದ ಇಲ್ಲಿನ ಪಾದಚಾರಿಗಳು ಸುಲಭವಾಗಿ ರಸ್ತೆ ದಾಟಲು ಸಾಧ್ಯವಾಗುತ್ತಿಲ್ಲ.ಜಂಕ್ಷನ್ ಪ್ರದೇಶ ಯಾವಾಗಲೂ ಜನದಟ್ಟಣೆಯಿಂದ ಕೂಡಿದ್ದು, ಪಾದಚಾರಿಗಳು ಹಾಗೂ ಸಾರ್ವಜನಿಕರಿಗೆ ಸಮಸ್ಯೆ ತಂದೊಡ್ಡುತ್ತಿದೆ. ನಾಲ್ಕು ರಸ್ತೆಗಳು ಕೂಡುವ ಅಪಾಯಕಾರಿ ಪ್ರದೇಶಮುಳ್ಳಿಕಟ್ಟೆ ಜಂಕ್ಷನ್ ಪ್ರದೇಶದಲ್ಲಿ ಯಾವುದೇ ಸೂಚನಾ ಫಲಕ, ಸಿಗ್ನಲ್ ಲೈಟ್ ಅಳವಡಿಸಿಲ್ಲ. ರಸ್ತೆ ವಿಸ್ತರಣೆಗೊಂಡು ವಾಹನಗಳ ಓಡಾಟದ ವೇಗವೂ ಹೆಚ್ಚಾಗಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗಿದೆ.
ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡೂ ಕಡೆ ಬ್ಯಾರಿಕೇಡ್ ಆಳವಡಿಸಿ ವಾಹನಗಳ ವೇಗ ಮಿತಿಗೆ ಕಡಿವಾಣ ಹಾಕಬೇಕು ಅಥವಾ ರಸ್ತೆಗಳ ಮೇಲೆ ಉಬ್ಬುಗಳ ನಿರ್ಮಾಣ ಮಾಡಿ ಪಾದಚಾರಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಅಪಾಯದ ಬಗ್ಗೆ ಮುಂಜಾಗ್ರತಾ ಫಲಕ ಮತ್ತು ಸೂಚನಾ ಫಲಕಗಳನ್ನು ಆಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಪ್ರದೇಶ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ಮುಳ್ಳಿಕಟ್ಟೆ ಜಂಕ್ಷನ್ ಯಾವಾಗಲೂ ಜನದಟ್ಟಣೆಯಿಂದ ಕೂಡಿರುವ ಪ್ರದೇಶವಾಗಿದ್ದು, ಪಾದಚಾರಿಗಳು ಹಾಗೂ ಸಾರ್ವಜನಿಕರಿಗೆ ಸಮಸ್ಯೆ ತಂದೊಡ್ಡುತ್ತಿದೆ. ಈ ಸಮಸ್ಯೆಗೆ ತುರ್ತು ಪರಿಹಾರ ಬೇಕಾಗಿದೆ.
– ಪ್ರದೀಪ ಆಚಾರ್ಯ, ಸ್ಥಳೀಯ ನಿವಾಸಿ. ಮುಳ್ಳಿಕಟ್ಟೆ-ಹೊಸಾಡು

ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿ ವೇಳೆ ಸರ್ಕಲ್ ನಿರ್ಮಿಸುವ ಯೋಜನೆ ಇದ್ದು, ಇದಕ್ಕೆ ತೊಂದರೆಯಾಗಿ ಕಾಮಗಾರಿ ಸ್ಥಗಿತಗೊಂಡಿದೆ. ಈ ಪ್ರದೇಶವು ಅಪಘಾತ ತಾಣವಾಗಿ ಮಾರ್ಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆ ತುರ್ತು ಸುರಕ್ಷತಾ ಕ್ರಮ ಕೈಗೊಳ್ಳಬೇಕು.
– ಚಂದ್ರಶೇಖರ ಪೂಜಾರಿ, ಅಧ್ಯಕ್ಷರು, ಹೊಸಾಡು ಗ್ರಾಪಂ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ಅನೇಕ ಕಡೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ನಾಲ್ಕು ರಸ್ತೆಗಳು ಕೂಡುತ್ತಿದ್ದು, ಈ ಪ್ರದೇಶದಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳ ಮತ್ತು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತುರ್ತು ಸುರಕ್ಷತಾ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು. ಈ ಸಂಬಂಧ ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲು ಮನವಿ ಮಾಡಲಾಗುವುದು.
ಬಿ.ಎಂ.ಸುಕುಮಾರ್ ಶೆಟ್ಟಿ, ಶಾಸಕರು, ಬೈಂದೂರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...