ಮಗಳ ಮೇಲೆ ಮೂರು ವರ್ಷ ಅತ್ಯಾಚಾರ ಎಸಗಿದ್ದ ರಾಕ್ಷಸ ತಂದೆ ಬಂಧನ

ಮುಂಬೈ
Published on

ಮಹಾರಾಷ್ಟ್ರ: ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಾಲ್ಕು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವ ಹೇಯ ಕೃತ್ಯ ಮುಂಬೈನಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ, 2020 ಮತ್ತು 2023ರ ನಡುವೆ ತನ್ನ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದಾಗ ತನ್ನ ತಂದೆ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಸಂತ್ರಸ್ತೆ ವೈದ್ಯರನ್ನು ಭೇಟಿ ಮಾಡಿದ ಬಳಿಕ ಆಕೆ 5 ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಬಾಲಕಿ ಮತ್ತು ತಾಯಿ, ಪಾಪಿ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದಲ್ಲಿ ಹೆಚ್ಚಾದ ಪೋಕ್ಸೋ ಪ್ರಕರಣಗಳು: ಇತ್ತೀಚೆಗೆ ಕೇರಳದ ತಿರುವನಂತಪುರಂನಲ್ಲಿ ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ 3 ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮಂಜೇರಿ ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕೆ ವ್ಯಕ್ತಿಯನ್ನು ದೋಷಿಯೆಂದು ಪ್ರಕಟಿಸಿ. ಐಪಿಸಿ ಸೆಕ್ಷನ್ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ  ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಎಲ್ಲಾ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ 3 ಜೀವಾವಾಧಿ ಶಿಕ್ಷೆಯ ಜೊತೆಗೆ 6.6 ಲಕ್ಷ ರೂ. ದಂಡವನ್ನು ವಿಧಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net