More

    ಮೇ 10 ರಂದು 6 ಗಂಟೆಗಳ ಕಾಲ ಮುಂಬೈ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಇರುವುದಿಲ್ಲ

    ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 10 ರಂದು 6 ಗಂಟೆಗಳ ಕಾಲ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನೇನು ಮುಂಗಾರು ಮಳೆ ಪ್ರಾರಂಭವಾಗಲಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನ ಹಾರಾಟಕ್ಕೆ ಯಾವುದೇ ಅಡೆತಡೆ ಉಂಟಾಗದಿರಲು ರನ್​ವೇ ನಿರ್ವಹಣಾ ಕಾರ್ಯ ನಡೆಯುವುದರಿಂದ ಈ ನಿರ್ಧಾರ ಕೈಗೊಂಡಿದೆ.

    ಹಾಗಾಗಿ ಮೇ 10 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಎರಡು ರನ್​ ವೇಗಳ ನಿರ್ವಹಣಾ ಕಾರ್ಯ ಅಂದು ಸಂಜೆ 5 ಗಂಟೆಯೊಳಗೆ ಪೂರ್ಣಗೊಂಡ ನಂತರ ವಿಮಾನ ಹಾರಾಟ ಕಾರ್ಯಾರಂಭಿಸಲಿದೆ. ಯಾವುದೇ ಅನಾನುಕೂಲವನ್ನು ತಪ್ಪಿಸಲು ಪ್ರಯಾಣಿಕರು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದೆ.

    ನೂರಾರು ಮನೆಗಳನ್ನು ಹೊತ್ತೊಯ್ದ ಸುಂಟರಗಾಳಿ: ಭೀಕರ ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts