More

    ಕಂಗನಾ ಕಚೇರಿ ನೆಲಸಮ: ಕಾರ್ಯಾಚರಣೆಗಿಳಿದ ಜೆಸಿಬಿ..!

    ನವದೆಹಲಿ: ಬಾಲಿವುಡ್​ ನಟಿ ಕಂಗನಾ ರಣಾವತ್, ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯಿಂದ ಇಂದು ಮುಂಬೈಗೆ ಮರಳುತ್ತಿದ್ದು, ಇದರ ನಡುವೆಯೇ ಮುಂಬೈನಲ್ಲಿರುವ ಅವರ ಕಚೇರಿಯನ್ನು ನೆಲಸಮ ಮಾಡಲಾಗುತ್ತಿದೆ.

    ಮುಂಬೈ ಅನ್ನು ಪಾಕ್​ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ತೊಡೆತಟ್ಟಿದ್ದಾರೆ. ಇಂದು ಬೆಳಗ್ಗೆಯಷ್ಟೇ ಟ್ವೀಟ್​ ಮಾಡಿರುವ ಕಂಗನಾ, ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಗೂಂಡಾಗಳು ಮುಂಬೈನಲ್ಲಿರುವ ನನ್ನ ಕಚೇರಿಯನ್ನು ಅಕ್ರಮವಾಗಿ ನೆಲಸಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಸೋಮವಾರವಷ್ಟೇ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಂದ್ರಾದ ಪಾಲಿ ಹಿಲ್​ನಲ್ಲಿರುವ ಕಂಗನಾ ಅವರ ಕಚೇರಿಗೆ ಭೇಟಿ ನೀಡಿ, ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸೀಲ್​ ಮಾಡಿದ್ದರು. ಅಲ್ಲದೆ, ಪರಿಶೀಲನೆ ಬಳಿಕ 14 ನಿಯಮ ಉಲ್ಲಂಘನೆಗಳ ಪಟ್ಟಿ ಸಹ ಮಾಡಿದ್ದರು. ನೆಲಸಮ ಮಾಡುವುದಾಗಿಯೂ ನೋಟಿಸ್​ ಸಹ ಹೊರಡಿಸಿದ್ದರು. ಅದರಂತೆ ಅವರ ಕಚೇರಿಯನ್ನು ಇಂದು ಮಹಾ ಸರ್ಕಾರ ಹೊಡೆದುರುಳಿಸುತ್ತಿದೆ.

    ಬೃಹತ್​ ಮುಂಬೈ ಮಹಾನಗರ ಪಾಲಿಕೆಯ ಈ ನಿರ್ಣಯವನ್ನು ಖಂಡಿಸಿರುವ ಕಂಗನಾ, ತಮ್ಮ ಟ್ವಿಟರ್​ ಅಕೌಂಟ್​ ಮೂಲಕ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ತಮ್ಮ ಮುಂಬೈ ಆಫೀಸ್​ ತೋರಿಸಿರುವ ಅವರು, ತಮ್ಮ ಕನಸೊಂದನ್ನು ಅಧಿಕಾರಿಗಳು ನುಚ್ಚುನೂರು ಮಾಡುತ್ತಿರುವುದಾಗಿ ಆರೋಪಿಸಿದ್ದರು.

    ‘ಇದು ನನ್ನ ‘ಮಣಿಕರ್ಣಿಕಾ’ ಆಫೀಸ್​. ಈ ಆಫೀಸ್ ಸ್ಥಾಪಿಸುವುದಕ್ಕೆ ನನ್ನ 15 ವರ್ಷಗಳ ಪರಿಶ್ರಮವಿದೆ. ನನ್ನದೇ ಸ್ವಂತದ್ದೊಂದು ಆಫೀಸ್​ ಮಾಡಿಕೊಳ್ಳಬೇಕೆಂಬ ಕನಸು ಬಹಳ ವರ್ಷಗಳಿಂದ ಇತ್ತು. ಆ ಕನಸನ್ನು ನುಚ್ಚುನೂರು ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದರು. (ಏಜೆನ್ಸೀಸ್​)

    ನನ್ನ ಕನಸು ನಾಶ ಮಾಡೋಕೆ ಹೊರಟಿದ್ದಾರೆ … ಕಂಗನಾ ಹೀಗೆ ಹೇಳಿದ್ದ್ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts