26.8 C
Bangalore
Friday, December 13, 2019

ಹುಟ್ಟುಹಬ್ಬದ ದಿನವೇ ಸ್ನೇಹಿತನ ದೇಹವನ್ನು ಕೇಕ್​ನಂತೆ ಕತ್ತರಿಸಿದ ಸ್ನೇಹಿತರು: ಉದ್ಯಾನಕ್ಕೆ ಕರೆದು ಕೃತ್ಯ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮುಂಬೈ: ಆತ ತನ್ನ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ. ಈ ಸಂಭ್ರಮವನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳಲು ಆತ ನಿರ್ಧರಿಸಿದ್ದ. ಪೂರ್ವ ನಿರ್ಧಾರಿತದಂತೆ ಆತ ಉದ್ಯಾನವೊಂದಕ್ಕೆ ತೆರಳಿದ್ದ. ಅಲ್ಲಿಗೆ ಆತನ ಸ್ನೇಹಿತರೂ ಬಂದಿದ್ದರು. ಆದರೆ, ಅವರೆಲ್ಲರೂ ಸೇರಿ ಕೇಕ್​ ಅನ್ನು ಕತ್ತರಿಸುವ ಬದಲು, ಹುಟ್ಟುಹಬ್ಬದ ಹುಡುಗನ ದೇಹವನ್ನೇ ಕೇಕ್​ ಎಂದು ಭಾವಿಸಿ ಕತ್ತರಿಸಿದರು!

ಇದು ಮುಂಬೈ ನಿವಾಸಿ ನಿತೇಶ್​ ಸಾವಂತ್​ ಎಂಬಾತನ ಕತೆ. ಮುಂಬೈನ ಘಾಟ್ಕೋಪರ್​ ಬಡಾವಣೆಯ ನಿವಾಸಿಯಾಗಿದ್ದ ಈತ ಭಾನುವಾರ 32ನೇ ವಸಂತಕ್ಕೆ ಕಾಲಿರಿಸಿದ್ದ. ಸಹಜವಾಗಿ ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಳ್ಳಲು ನಿರ್ಧರಿಸಿದ್ದ. ಅದಕ್ಕಾಗಿ ಘಾಟ್ಕೋಪರ್​ನ ಪಂತ್​ ನಗರದಲ್ಲಿರುವ ಉದ್ಯಾನವೊಂದರಲ್ಲಿ ಪಾರ್ಟಿ ಆಯೋಜಿಸಿದ್ದ. ತನ್ನ ಸ್ನೇಹಿತರನ್ನೂ ಆಹ್ವಾನಿಸಿದ್ದ.

ಎಲ್ಲರೂ ನಿಗದಿಯಂತೆ ಉದ್ಯಾನಕ್ಕೆ ಬಂದಿದ್ದರು. ಆರಂಭದಲ್ಲಿ ಆಪ್ತವಾದ ಮಾತುಕತೆ ನಡೆಯಿತು. ಮದ್ಯಪಾನ ಮಾಡಿದ್ದೂ ಆಯಿತು. ಅಷ್ಟರಲ್ಲಿ ಇತ್ತೀಚೆಗೆ ನಡೆದಿದ್ದ ಜಗಳದ ವಿಚಾರ ಪ್ರಸ್ತಾಪವಾಯಿತು. ಈ ಜಗಳಕ್ಕೆ ನಿತೇಶ್​ ಸಾವಂತ್​ ಕಾರಣ ಎಂದು ನಿರ್ಧರಿಸಿದ್ದ ಸ್ನೇಹಿತರು ಆತನಿಗೆ ಮನಬಂದಂತೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಿಸಿಕೊಂಡಿರುವ ಘಾಟ್ಕೋಪರ್​ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಘಾಟ್ಕೊಪರ್​ ಪ್ರದೇಶದಲ್ಲಿ ವಾರದಲ್ಲಿ ನಡೆದಿರುವ ಎರಡನೇ ಕೊಲೆ ಇದಾಗಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. (ಏಜೆನ್ಸೀಸ್​)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....