More

    VIDEO | ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥರ ಪತ್ತೆಗೆ ಬಲೆ ಬೀಸಿದ ಪೊಲೀಸರು!

    ಮಹಾರಾಷ್ಟ್ರ: ಯುವಕನೊಬ್ಬ ಇಬ್ಬರು ಯುವತಿಯರನ್ನು ತನ್ನ ಬೈಕ್​ನಲ್ಲಿ ಕೂರಿಸಿಕೊಂಡು ವೀಲ್ಹಿಂಗ್ ಮಾಡಿದ್ದಾನೆ. ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಾ ಸಾಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈತನ ವಿರುದ್ದು ಮುಂಬೈ ಪೊಲೀಸರು ಕ್ರಮ ಜರುಗಿಸಿದ್ದು, ಎಫ್​ಐಆರ್ ದಾಖಲಿಸಿದ್ದಾರೆ.

    ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಒಬ್ಬಳು ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಮತ್ತು ಇನ್ನೊಬ್ಬಳನ್ನು ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡಿದ್ದಾನೆ. ಬಳಿಕ ಅಪಾಯಕಾರಿಯಾಗಿ ವೀಲ್ಹಿಂಗ್ ಮಾಡುತ್ತಾ ಮುಂದೆ ಸಾಗಿದ್ದಾನೆ. ಈ ವೇಳೆ ಬೈಕ್​ನಲ್ಲಿ ಮುಂದೆ ಕುಳಿತಿರುವ ಯುವತಿ ಜೋಶ್​ನಲ್ಲಿ ಕೈಬೀಸಿದ್ದಾಳೆ.

    ಇದನ್ನೂ ಓದಿ: ಈ ಚಿತ್ರದಲ್ಲಿರೋದು ಒಂದೇ ಪಾತ್ರ; ‘ರಾಘು’ ಬಿಡುಗಡೆ ದಿನಾಂಕ ಫಿಕ್ಸ್​

    ಕಾನೂನು ಸುರಕ್ಷತಾ ನಿಯಮಗಳನ್ನು ಮೀರಿ ಮೂವರು ಬೈಕ್ ಸ್ಟಂಟ್​ನಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಮೂವರು ಹೆಲ್ಮೆಟ್ ಕೂಡ ಧರಿಸಿಲ್ಲ. ಅಪಾಯಕಾರಿಯಾಗಿ ವೀಲ್ಹಿಂಗ್ ಸ್ಟಂಟ್ಸ್ ಮಾಡುವಾಗ ಸ್ವಲ್ಪ ಎಡವಿದರೂ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ ಈ ಮೂವರು ಸೇರಿಕೊಂಡ ಪ್ರಾಣವನ್ನೂ ಲೆಕ್ಕಿಸದೆ ಸ್ಟಂಟ್ಸ್​ನಲ್ಲಿ ಪಾಲ್ಗೊಂಡಿದ್ದಾರೆ.

    PotholeWarriors ಎಂಬ ಟ್ವಿಟರ್ ಪೇಜ್​ನಲ್ಲಿ ಈ ವಿಡಿಯೋ ಅಪ್ಲೋಡ್ ಆಗಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಈ ವೇಳೆ ಮುಂಬೈ ಸಂಚಾರಿ ಪೊಲೀಸರನ್ನು ಟ್ಯಾಗ್ ಮಾಡಿ ಮೂವರು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿನಿಮಾದಲ್ಲಿ ಚಾನ್ಸ್ ಕೊಡಿಸ್ತೀನಿ ಎಂದು ನಂಬಿಸಿ ಪಂಗನಾಮ ಹಾಕಿದ ಆರೋಪಿ ಅಂದರ್

    ಮುಂಬೈ ಸಂಚಾರಿ ಪೊಲೀಸರು ವಿಡಿಯೋಗೆ ಪ್ರತಿಕ್ರಿಯಿಸಿ, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿಗಳ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ, ನೀವು ಮೆಸೇಜ್ ಮಾಡಿ ತಿಳಿಸಬಹುದು. ಪೊಲೀಸರು ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 279 ಮತ್ತು 336 ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts