More

  ಮುಂಬೈನ ತಾಜ್ ಹೋಟೆಲ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತಾ ಪಡೆಯಿಂದ ಶೋಧ ಕಾರ್ಯ!

  ಮುಂಬೈ: ಇಂದು ಮಧ್ಯಾಹ್ನ ಮುಂಬೈನ ತಾಜ್ ಹೋಟೆಲ್​ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ.

  ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ವೈದ್ಯ ಹೇಮಚಂದ್‌ ಮಾಂಝಿ, ಕಾರಣ ಹೀಗಿದೆ..

  ಇಂದು ಮಧ್ಯಾಹ್ನದ ಸುಮಾರಿಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿದವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಎರಡೂ ಸ್ಥಳದಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿದ್ದು, ಇದುವರೆಗೆ ಅನುಮಾನಾಸ್ಪದವಾದ ಏನೂ ಕಂಡು ಬಂದಿಲ್ಲ ಎಂದು  ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬೆದರಿಕೆ ಬಂದಿದ್ದು ಕರೆ ಮಾಡಿರುವವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

  ಇತ್ತೀಚೆಗೆ ಕೇಂದ್ರ ಗೃಹ ಸಚಿವಾಲಯ, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3, ಬುರಾರಿ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಗುರು ತೇಗ್ ಬಹದ್ದೂರ್ ಆಸ್ಪತ್ರೆ, ಬಾರಾ ಹಿಂದೂ ರಾವ್ ಆಸ್ಪತ್ರೆ, ಜನಕಪುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ದೀನ್ ದಯಾಳ್ ಉಪಾಧ್ಯಾಯ ಮತ್ತು ದಾಬ್ರಿಯ ದಾದಾ ದೇವ್ ಆಸ್ಪತ್ರೆಗಳಿಂದ ಬಾಂಬ್ ಬೆದರಿಕೆಗಳು ವರದಿಯಾದ ಕೆಲವು ದಿನಗಳ ನಂತರ ಈ ಬೆದರಿಕೆ ಬಂದಿದೆ.

  ಬಿಹಾರ: ರಾಹುಲ್ ಗಾಂಧಿ​​ ಬರುತ್ತಿದ್ದಂತೆ ಕುಸಿದ ವೇದಿಕೆ, ತಪ್ಪಿದ ಅನಾಹುತ, ವಿಡಿಯೋ ಇಲ್ಲಿದೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts