ಚಿಕ್ಕಬಳ್ಳಾಪುರ: ಗೌರಿಬಿದನೂರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಕೊಡುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ರಸ್ತೆಗೆ ನೀರು ಸುರಿದು ಧೂಳು ಕ್ಲೀನ್ ಮಾಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ನಗರಸಭೆ ವಾಹನದಲ್ಲಿ ರಸ್ತೆಯುದ್ದಕ್ಕೂ ನೀರು ಸುರಿಸುತ್ತ ಹೋಗಿರುವ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಡಿಯೋಕೆ ನೀರು ಕೊಡಿ ಎಂದರೆ ನೀರಿಲ್ಲ ಎನ್ನುತ್ತಾರೆ. ಆದರೆ, ರಾಜಕಾರಣಿಗಳು ಬರುತ್ತೇವೆ ಎಂದರೆ ರಸ್ತೆಯನ್ನು ನೀರಿನಿಂದ ತೊಳೆಯುತ್ತಾರೆ. ಮಾಜಿ ಸಿಎಂಗೆ ನೀರಿನ ಸ್ವಾಗತ ಅಗತ್ಯವಿದೆಯಾ ಎಂದು ಪ್ರಶ್ನಿಸುತ್ತಿದ್ದಾರೆ. ಕುಡಿಯೋದಿಕ್ಕೆ ನೀರು ಕೇಳಿದರೆ ಇಲ್ಲ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಬರುತ್ತೇನೆಂದರೆ ಇದೆಯಾ ಎಂದು ಕಟುವಾಗಿ ಟೀಕಿಸಿದ್ದಾರೆ.
ಇಂದು ಕನಕಜಯಂತಿ ನಿಮಿತ್ತ ಸಿದ್ದರಾಮಯ್ಯ ಗೌರಿಬಿದನೂರಿಗೆ ತೆರಳುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)

https://youtu.be/CGk4GaXOUC8