ರಾಣೆಬೆನ್ನೂರ: ರಾಜ್ಯ ಪೌರ ನೌಕರರ ಸಂಘ ವತಿಯಿಂದ ಹಾವೇರಿ ಜಿಲ್ಲಾ ಮಟ್ಟದ ಸ್ಥಳಿಯ ಸಂಸ್ಥೆಗಳ ಪೌರ ನೌಕರರ ಶಕ್ತಿ ಪ್ರದರ್ಶನ ಹಾಗೂ ಸನ್ಮಾನ ಸಮಾರಂಭ ಜೂ. 14ರಂದು ಬೆಳಗ್ಗೆ 11 ಗಂಟೆಗೆ ನಗರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.
ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ ಅಧ್ಯಕ್ಷತೆ ವಹಿಸುವರು. ಮಾಜಿ ಅಧ್ಯಕ್ಷ ಜಿ.ಎಸ್. ಮಂಜುನಾಥ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಯೋಜನಾ ನಿರ್ದೇಶಕ ಎಸ್.ಎಸ್. ಮತ್ತಿಕಟ್ಟಿ, ತಹಸೀಲ್ದಾರ ಆರ್.ಎಚ್. ಭಾಗವಾನ, ಡಿವೈಎಸ್ಪಿ ಲೋಕೇಶ ಜೆ, ಆಯುಕ್ತ ಫಕ್ಕೀರಪ್ಪ ಇಂಗಳಗಿ, ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ, ಉಪಾಧ್ಯಕ್ಷ ನಾಗೇಂದ್ರಸಾ ಪವಾರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಪ್ಪ ಕರಡೆಣ್ಣನವರ ಮತ್ತಿತರರು ಪಾಲ್ಗೊಳ್ಳುವರು ಎಂದು ತಾಲೂಕು ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಏಳುಕೋಟೆಪ್ಪ ಗೋಣಿಬಸಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.