More

    ಮಾಚಿದೇವರ ಆದರ್ಶ ಅನುಕರಣೀಯ

    ಕಡೂರು: ಬಹುಸಂಖ್ಯಾತರ ನಡುವೆ ಅಲ್ಪಸಂಖ್ಯಾತ ಸಮುದಾಯಗಳನ್ನು ಮುನ್ನಡೆಸುವ ಅಗತ್ಯವಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

    ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಸೋಮವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣ ಅವರು ಅನುಭವ ಮಂಟಪದಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸಿದ್ದರು. ಮಡಿವಾಳ ಮಾಚಿದೇವ ಶರಣರ ಬಟ್ಟೆಗಳನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಿದ್ದರು. ಅರಸನಿಗೆ ಇರುವಷ್ಟು ಬೆಲೆ ಅಗಸನಿಗೂ ಇರಬೇಕು ಎಂಬುದು ಮಾಚಿದೇವರ ಅಭಿಪ್ರಾಯವಾಗಿತ್ತು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

    ಮಡಿವಾಳ ಸಮಾಜದ ಸಮುದಾಯ ಭವನ ಶಿಥಿಲಗೊಂಡಿದ್ದು, ಅದರ ದುರಸ್ತಿಗೆ ಪುರಸಭೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

    ಜಿಪಂ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ, ಮಡಿವಾಳ ಸಮಾಜದ ಕಾಯಕವನ್ನು ಎಲ್ಲ ಸಮಾಜದವರು ಮೆಚ್ಚುತ್ತಾರೆ. ಶರಣರ ವಚನಗಳನ್ನು ಮಾಚಿದೇವರು ಉಳಿಸುವ ಕಾರ್ಯ ಮಾಡಿದ್ದರು. ಈಗ ಸರ್ಕಾರದ ಸವಲತ್ತು ಪಡೆಯಲು ಸಂಘಟನೆ ಅವಶ್ಯಕ. ಈ ಸಮಾಜಕ್ಕೆ ರಾಜಕೀಯವಾಗಿ ಶಕ್ತಿ ಸಿಗಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts