More

    ಪುರಸಭೆಯಿಂದ ಕಟ್ಟುನಿಟ್ಟಿನ ಕ್ರಮ

    ಚಿಕ್ಕೋಡಿ: ಮಹಾಮಾರಿ ಕರೋನಾ ವೈರಸ್ ತಡೆಗಟ್ಟುವಲ್ಲಿ ಚಿಕ್ಕೋಡಿ ಪುರಸಭೆ ಕೈಗೊಂಡಿರುವ ನಿರ್ಣಯಗಳು ಶ್ಲಾಘನೀಯ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

    ಚಿಕ್ಕೋಡಿ ಪುರಸಭೆ ಆವರಣದಲ್ಲಿ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ನಡೆದ ಪುರಸಭೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದ ಬಳಿಕ ಚಿಕ್ಕೋಡಿಯಲ್ಲಿ ಸಾರ್ವಜನಿಕರಿಗೆ ದಿನಸಿ ಹಾಗೂ ತರಕಾರಿ ಯಾವ ರೀತಿ ಪೂರೈಸಬೇಕೆಂದು ವರ್ತಕರ ಸಭೆ ಕರೆದು ಅವರ ದೂರವಾಣಿ ನಂಬರ್ ಯಾದಿ ಮಾಡಲಾಗಿದೆ. ಅಲ್ಲದೆ, ಮನೆ ಮನೆಗೆ ದಿನಸಿ ಹಾಗೂ ತರಕಾರಿ ಪೂರೈಕೆ ಮಾಡಲಾಗುತ್ತಿದೆ. ಪ್ರತಿ ಗಲ್ಲಿಗಳ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

    ಕರೊನಾ ಸೋಂಕು ತಡೆಗಟ್ಟಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪುರಸಭೆ ಸಿಬ್ಬಂದಿಯೊಂದಿಗೆ ಚರ್ಚಿಸಿ, ಸಾರ್ವಜನಿಕರ ಆರೋಗ್ಯ ಕಾಪಾಡಲು ಕಾಳಜಿ ವಹಿಸಬೇಕು. ಪಡಿತರ ಹಾಗೂ ಜನಧನ್ ಖಾತೆಗಳಿಗೆ ಹಣ ಜಮಾ ಆದ ಬಗ್ಗೆ ಮಾಹಿತಿ ಪಡೆಯಬೇಕು. ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಸಂಸದ ಜೊಲ್ಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ, ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ಉಪಾಧ್ಯಕ್ಷ ಜಗದೀಶ ಕವಟಗಿಮಠ, ಬಸವಜ್ಯೋತಿ ಯೂತ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ತಹಸೀಲ್ದಾರ್ ಸುಭಾಷ ಸಂಪಗಾವಿ, ವಿಠ್ಠಲ ಶಿಂಧೆ, ಡಾ. ಸುಂದರ ರೂಗಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts