ಕಾರವಾರ : ಅನುಮೋದನೆ ನೀಡಿದ ಬಳಿಕವೂ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸದೇ ವಿಳಂಬ ಧೋರಣೆ ತೋರುವ Municipality ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ವಿಳಂಬ ಮಾಡಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳು ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡದೇ ಇರುವುದರಿಂದ ಆರ್ಥಿಕ ಪ್ರಗತಿ ಕುಂಠಿತವಾಗಿದೆ ಎಂದ ಜಿಲ್ಲಾಧಿಕಾರಿಗಳು, ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಗರಾಭಿವೃದ್ಧಿಕೋಶದ ಪಿಡಿ ಅವರಿಗೆ ನಿರ್ದೇಶನ ನೀಡಿದರು.
Municipality Water Problem
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಹಾಗೂ 15 ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ 17 ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ. ಫೆಬ್ರವರಿ ಮೊದಲ ವಾರದ ಒಳಗೆ ಎಲ್ಲ ಕಾಮಗಾರಿಗಳು ಮುಕ್ತಾಯವಾಗುವಂತೆ ನೋಡಿಕೊಳ್ಳಿ. ಪೂರ್ಣಗೊಂಡ ಕಾಮಗಾರಿಗಳಿಗೆ ವಿಳಂಬ ಧೋರಣೆ ತೋರದೇ ಗುತ್ತಿಗೆದಾರರಿಗೆ ಹಣ ಪಾವತಿಸಿ. ಆರ್ಥಿಕ ವರ್ಷ ಕೊನೆಗೊಳ್ಳುವ ಒಳಗೆ ಶೇ.100 ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿ ಎಂದು ಸೂಚನೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೇಲ್ಲಾ ವರ್ಗಿಸ್ ಮಾತನಾಡಿ, ನಗರಸ್ಥಳೀಯ ಸಂಸ್ಥೆಗಳ Municipality ಮುಖ್ಯಾಧಿಕಾರಿಗಳಿಗೆ 2 ಲಕ್ಷದವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲು ಅವಕಾಶವಿದೆ. 2 ಲಕ್ಷದೊಳಗಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಎಲ್ಲ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯಪ್ರರ್ವತರಾಗಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು. ಕೋಶದ ಇಇ ಕೆ. ರವಿಕುಮಾರ್, ಎಇಇ ಭಾಸ್ಕರ ಗೌಡ, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಇದ್ದರು.
ಇದನ್ನೂ ಓದಿ: https://www.vijayavani.net/you-ruined-sanju-samson-future-with-your-ego-angry-congress-mp