ಕಾರ್ಕಳ: ಕರ್ನಾಟಕ ಗಮಕ ಕಲಾ ಪರಿಷತ್, ಕರ್ನಾಟಕ ಗಮಕ ಕಲಾ ಪರಿಷತ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಜ.25ರಂದು ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಕಳ ತಾಲೂಕು ಗಮಕ ಸಮ್ಮೇಳನ ಸರ್ವಾಧ್ಯಕ್ಷರಾಗಿ ವ್ಯಾಖ್ಯಾನಕಾರ ಮುನಿರಾಜ ರೆಂಜಾಳ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಸತೀಶ್ ಕುಮಾರ್ ಕೆಮ್ಮಣ್ಣು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.