More

    ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ಐವರು ಶಾಸಕರಿಂದ ರಾಜೀನಾಮೆ: ನೋ ಕಮೆಂಟ್​ ಎಂದ ಕೆಎಚ್​

    ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ಕಗ್ಗಂಟಾಗಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಅವರ ಅಳಿಯನಿಗೆ ಕೋಲಾರ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಹಾಲಿ ಶಾಸಕರು ಮತ್ತು ಪರಿಷತ್ ಸದಸ್ಯರು ಪಕ್ಷಕ್ಕೆ ಬೆದರಿಕೆ ಒಡ್ಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಚಿಂತಾಮಣಿ ಶಾಸಕ ಹಾಗೂ ಸಚಿವ ಡಾ. ಎಂಸಿ ಸುಧಾಕರ್ ಮತ್ತು ಕೊತ್ತೂರು ಮಂಜುನಾಥ್ ಮತ್ತು ಬೇರೆ ನಾಯಕರ ಬಗ್ಗೆ ಮಾತನಾಡುವುದಿಲ್ಲ. ಆದರೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕೋಲಾರ ಲೋಕಸಭೆ ಕ್ಷೇತ್ರ ಯಾವತ್ತಿಗೂ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಏಳು ಬಾರಿ ಸಂಸತ್ತಿಗೆ ಆಯ್ಕೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕೇವಲ ಜಾಫರ್ ಶರೀಫ್ ಮತ್ತು ಬಿ ಶಂಕರಾನಂದ ಮಾತ್ರ ತನ್ನಂತೆ ಏಳು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು.

    ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ಐವರು ಶಾಸಕರಿಂದ ರಾಜೀನಾಮೆ: ನೋ ಕಮೆಂಟ್​ ಎಂದ ಕೆಎಚ್​

    ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂದು ನಾನು ಕೇಳಿಲ್ಲ, ಆ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು, ಇವತ್ತು ಬೆಳಗ್ಗೆ ಸಹ ತಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತಾಡಿದ್ದೇನೆ. ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಎರಡು ಎಡ ಮತ್ತು ಎರಡು ಬಲ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ನಡೆದುಕೊಂಡು ಬಂದಿರುವ ಸಂಪ್ರದಾಯ. ಅದು ಏನು ಇದ್ದರು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಮುನಿಯಪ್ಪ ಹೇಳಿದರು.

    ರಾಜೀನಾಮೆ ಎಚ್ಚರಿಕೆಗೆ ಬೆದರಿದ ಕಾಂಗ್ರೆಸ್​: ಸಚಿವ ಕೆ.ಎಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಕೋಲಾರ ಟಿಕೆಟ್ ಖಚಿತವಾದರೆ ರಾಜೀನಾಮೆ ನೀಡುವುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಬಣ ಬೆದರಿಕೆ ಒಡ್ಡಿದೆ. ತಮ್ಮ ಡಿಮ್ಯಾಂಡ್‌ಗೆ ಹೈಕಮಾಂಡ್ ಮಣಿಯದಿದ್ದರೆ ರಾಜೀನಾಮೆ ಕೊಡ್ತೀವಿ ಎಂದು ಕೋಲಾರ ಶಾಸಕರು ಹೇಳುತ್ತಿದ್ದಾರೆ. ಎಂಎಲ್ಸಿ ಅನಿಲ್ ಕುಮಾರ್, ಶಾಸಕ ನಂಜೇಗೌಡ, ಕೊತ್ತೂರು ಮಂಜುನಾಥ್, ಬಂಗಾರಪೇಟೆ ನಾರಾಯಣಸ್ವಾಮಿ ಸೇರಿ ಪ್ರಮುಖ ಶಾಸಕರಿಂದ ಪಕ್ಷಕ್ಕೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ.

    ಮಾಜಿ ಸಚಿವ ರಮೇಶ್ ಕುಮಾರ್, ಸಚಿವ ಎಂ.ಸಿ.ಸುಧಾಕರ್, ಶಾಸಕರಾದ ಕೊತ್ತೂರು ಮಂಜು ಹಾಗೂ ಮಾಲೂರು ನಂಜೇಗೌಡ, ಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್ ಹಾಗೂ ಅನಿಲ್ ಕುಮಾರ್ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯ ಮಾಹಿತಿ ತಿಳಿದು ಸಿಎಂ ಸೂಚನೆ ಮೇರೆಗೆ ಸಭೆಗೆ ತೆರಳಲು ಸಚಿವ ಬೈರತಿ ಸುರೇಶ್ ಮುಂದಾಗಿದ್ದರು. ಕೋಲಾರ ನಾಯಕರಿಗೆ ಕರೆ ಮಾಡಿ ಬೈರತಿ ಸುರೇಶ್ ಮಾತನಾಡಿದ್ದಾರೆ.

    ಲೋಕಸಭಾ ಚುನಾವಣೆ: ಮೊದಲ ದಿನವೇ ರಾಮನಗರದಲ್ಲಿ ಡಿಕೆ ಸುರೇಶ್‌ ನಾಮಿನೇಷನ್‌ ಸಲ್ಲಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts