ಸಿನಿಮಾ

ಅಬ್ದುಲ್ ಕಲಾಂ ವಸತಿ ಕಾಲೇಜು ಪ್ರವೇಶಕ್ಕೆ ಆಹ್ವಾನ

ಹಾವೇರಿ: ಜಿಲ್ಲೆಯ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿಗೆ 2023-24ನೇ ಸಾಲಿನಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶಾವಕಾಶಕ್ಕೆ ಮೀಸಲಿಡಲಾಗಿದೆ. ಆಸಕ್ತರು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ಪ್ರಾಚಾರ್ಯರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು, ಕರ್ಜಗಿ, ಅಕ್ಕಿಆಲೂರು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಭೂ ವೀರಾಪುರ ಇಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Latest Posts

ಲೈಫ್‌ಸ್ಟೈಲ್