ಮುರಾರ್ಜಿ ವಸತಿ ಶಾಲೆ ಗ್ರೀನ್ ಅವಾರ್ಡ್ ಪ್ರಶಸ್ತಿಗೆ ಭಾಜನ

ಕುಶಾಲನಗರ: ಕುಶಾಲನಗರ ತಾಲೂಕಿನ ಬಸವನಹಳ್ಳಿಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ ಗ್ರೀನ್ ಆ್ಯಂಡ್ ಗ್ರೀನ್ ಎಂಬ ಅಂತಾರಾಷ್ಟ್ರೀಯ ಸಂಸ್ಥೆ ಕೊಡಮಾಡುವ ಗ್ರೀನ್ ಅವಾರ್ಡ್ ಪ್ರಶಸ್ತಿಗೆ ಭಾಜನವಾಗಿದೆ.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗಿರಿಜನರ ಹಾಡಿಗೆ ಹೊಂದಿಕೊಂಡಂತೆ ಇರುವ ಸುಮಾರು 10 ಎಕರೆ ವಿಶಾಲ ಪ್ರದೇಶದಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಆರಂಭವಾದ ಈ ವಸತಿ ಶಾಲೆಯಲ್ಲಿ ಗ್ರಾಮೀಣ ಪ್ರದೇಶಗಳ 250 ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾ ಬಂದಿದ್ದು ಇಲ್ಲಿಯವರೆಗೆ ಹತ್ತಾರು ಸಾವಿರ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ.
ಶಾಲೆಯಲ್ಲಿನ ವಿಶಾಲ ಪ್ರದೇಶವನ್ನು ಹಸಿರು ಪರಿಸರವಾಗಿ ರೂಪಿಸುವ ಪಣ ತೊಟ್ಟ ಶಾಲಾ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶಾಲಾ ಪರಿಸರದಲ್ಲಿ ನೂರಾರು ಸಂಖ್ಯೆಯ ಪರಿಸರ ಸ್ನೇಹಿ ಗಿಡಗಳನ್ನು ನೆಟ್ಟು ಪೋಷಿಸಿ ಮರಗಳನ್ನಾಗಿಸಿರುವುದು ಹಾಗೂ ಶಾಲೆಯ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕೆ, ಪ್ರಾಂಶುಪಾಲರು ಹಾಗೂ ಬೋಧಕರಲ್ಲಿ ಅತ್ಯುತ್ತಮ ಹೊಂದಾಣಿಕೆ ಸೇರಿದಂತೆ ವಿವಿಧ ಆಯಾಮಗಳನ್ನು ಪರಿಶೋಧಿಸಿ ಶಾಲೆಗೆ ಗ್ರೀನ್ ಆ್ಯಂಡ್ ಗ್ರೀನ್ ಅವಾರ್ಡ್ ನೀಡಲಾಗುತ್ತಿದೆ ಎಂದು ಗ್ರೀನ್ ಆ್ಯಂಡ್ ಗ್ರೀನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಚ್ಚಿದಾನಂದ ಜಮದಗ್ನಿ ತಿಳಿಸಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೂ ಮುನ್ನ ಗ್ರೀನ್ ಆ್ಯಂಡ್ ಗ್ರೀನ್ ಸಂಸ್ಥೆ ಹಾಗೂ ಶಾಲೆಯ ವತಿಯಿಂದ ಶಾಲಾ ಪರಿಸರದಲ್ಲಿ ಮತ್ತೆ 150 ಗಿಡಗಳನ್ನು ನೆಡಲಾಯಿತು.

ನಂತರ ಶಾಲಾ ವಿದ್ಯಾರ್ಥಿಗಳೊಂದಿಗೆ ಸಚ್ಚಿದಾನಂದ ಜಮದಗ್ನಿ ಗಿಡ ಮರಗಳು ಹಾಗೂ ಪರಿಸರ ಕುರಿತಾಗಿ ಸಂವಾದ ನಡೆಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಎಸ್.ಎಸ್.ಶ್ರೀದೇವಿ, ಗ್ರೀನ್ ಆ್ಯಂಡ್ ಗ್ರೀನ್ ಸಂಸ್ಥೆಯು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಮುಖ್ಯಸ್ಥರು ವಿಶ್ವಸಂಸ್ಥೆಯ ಸದಸ್ಯರೂ ಆಗಿದ್ದಾರೆ. ಇಂತಹ ಸಂಸ್ಥೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ಪಡೆದು ಖುದ್ದಾಗಿ ಬಂದು ಎಲ್ಲವನ್ನು ಅವಲೋಕಿಸಿ ಇಂತಹ ಪ್ರಶಸ್ತಿ ನೀಡಿರುವುದು ನಮಗೆ ಹೆಮ್ಮೆ ತಂದಿದೆ. ಹಾಗೆಯೇ ಇನ್ನಷ್ಟು ಪರಿಸರ ಪೂರಕವಾದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಜತೆಗೆ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಲು ಸಹಾಯಕವಾಗಿದೆ. ಸಂಸ್ಥೆಗೆ ಸಿಕ್ಕಿರುವ ಬಹುಮಾನದ ಹಿಂದೆ ಹಿಂದಿನ ಪ್ರಾಂಶುಪಾಲರಾದ ಕೆ.ವಿ.ಸುರೇಶ್ ಹಾಗೂ ಚಂದ್ರಶೇಖರರೆಡ್ಡಿ ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕರ ಶ್ರಮವನ್ನು ಸ್ಮರಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರೀನ್ ಆ್ಯಂಡ್ ಗ್ರೀನ್ ಸಂಸ್ಥೆಯ ರಾಜ್ಯ ಸಂಯೋಜಕ ಕೆ.ಆರ್.ರಮೇಶ್, ಪುಟ್ಟರಾಜು, ಜಗದೀಶ್, ಉಪನ್ಯಾಸಕ ಶಿವಕುಮಾರ್, ಶಿಕ್ಷಕ ಗಿರೀಶ್, ರಮೇಶ್ ಇದ್ದರು.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…