More

    ಬಿಜೆಪಿ ನಾಯಕನ ಕೊಲೆ ಕೇಸ್: ಸಿಬಿಐನಿಂದ ನಿವೃತ್ತ ಐಪಿಎಸ್ ಅಧಿಕಾರಿ ವಿಚಾರಣೆ

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ಹುಬ್ಬಳ್ಳಿ-ಧಾರವಾಡ ಮಾಜಿ ಪೊಲೀಸ್ ಆಯುಕ್ತ ಪಾಂಡುರಂಗ ಎಚ್. ರಾಣೆ ಅವರನ್ನು ಸೋಮವಾರ ವಿಚಾರಣೆ ನಡೆಸಿತು.

    ಸಿಬಿಐ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿರುವ ಸಿಬಿಐ ಕಚೇರಿಗೆ ಬೆಳಗ್ಗೆ ಹಾಜರಾದ ರಾಣೆ ವಿಚಾರಣೆಗೆ ಒಳಗಾದರು. 2017ರಲ್ಲಿ ಸೇವೆಯಿಂದ ನಿವೃತ್ತಿ ಹೊಂದಿರುವ ರಾಣೆ ಅವರು ಯೋಗೀಶ್ ಗೌಡ ಕೊಲೆ ನಡೆದ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ.

    ಇದನ್ನೂ ಓದಿ  ರವಿಚಂದ್ರನ್ ಅಭಿನಯದಲ್ಲಿ ಸಿನಿಮಾ ಮಾಡ್ತಾರಾ ಗಿರಿರಾಜ್?  

    ಮಹತ್ವದ ಮಾಹಿತಿ ಕಲೆ ಹಾಕಿರುವ ಸಿಬಿಐ, ‘‘ಈ ಪ್ರಕರಣದಲ್ಲಿ ಏನೆಲ್ಲಾ ಕಾನೂನು ಕ್ರಮ ಕೈಗೊಂಡಿದ್ದೀರಿ, ಇದರಲ್ಲಿ ಶಾಮೀಲಾದವರ ಬಗ್ಗೆ ಯಾವೆಲ್ಲಾ ಸಾಕ್ಷ್ಯ ಪತ್ತೆಯಾಗಿತ್ತು’’ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಣೆ ಅವರನ್ನು ಪ್ರಶ್ನಿಸಿದೆ. ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಆರೋಪವಿದ್ದು, ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹಸ್ತಕ್ಷೇಪವಿರುವ ಬಗ್ಗೆಯೂ ಸಿಬಿಐ ಪ್ರಸ್ತಾಪಿಸಿದೆ ಎನ್ನಲಾಗಿದೆ.

    ವಿಚಾರಣೆಗೆ ರಾಣೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಪ್ರಕರಣದಲ್ಲಿ ತಾವು ಕೈಗೊಂಡ ಕಾನೂನು ಕ್ರಮಗಳ ಬಗ್ಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇವರು ನೀಡಿದ ಹೇಳಿಕೆ ಆಧಾರದ ಮೇಲೆ ಸದ್ಯದಲ್ಲೇ ಕೆಲ ಪೊಲೀಸರು ಹಾಗೂ ಖಾಸಗಿ ವ್ಯಕ್ತಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ  ಬೆತ್ತಲೆಯಾಗಿರುವ ಫೋಟೋವನ್ನು ಪೋಸ್ಟ್​ ಮಾಡಿ, ಟ್ರೋಲ್​ ಆದ ಕ್ರಿಕೆಟರ್​ ಮೊಹಮ್ಮದ್​ ಶಮಿ ಪತ್ನಿ…

    ಈ ಹಿಂದೆಯೇ ರಾಣೆ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ, ಸಾಕಷ್ಟು ಮಾಹಿತಿ ಕಲೆ ಹಾಕಿತ್ತು. ಇತ್ತೀಚೆಗೆ ಹಾವೇರಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ ರಾಣೆ ಅವರನ್ನು ಮತ್ತೆ ವಿಚಾರಣೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಎಂಟು ಮಂದಿ ಆರೋಪಿಗಳ ವಿರುದ್ಧ ಇತ್ತೀಚೆಗಷ್ಟೇ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಆರೋಪಿಗಳ ಬೆನ್ನು ಬಿದ್ದಿರುವ ಸಿಬಿಐ ಸಾಕ್ಷ್ಯ ಸಂಗ್ರಹ ಕಾರ್ಯದಲ್ಲಿ ತೊಡಗಿದೆ.ಕೊಲೆಯ ಹಿಂದೆ ಪೊಲೀಸರು ಹಾಗೂ ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ.

    2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಜಿಮ್‌ನಲ್ಲಿ ಯೋಗಿಶಗೌಡ ಕೊಲೆ ನಡೆದಿತ್ತು. ರಾಜ್ಯ ಸರ್ಕಾರ ಈ ಪ್ರಕರಣವನ್ನು 2019 ಸೆಪ್ಟೆಂಬರ್‌ನಲ್ಲಿ ಸಿಬಿಐಗೆ ವರ್ಗಾವಣೆ ಮಾಡಿತ್ತು.

    ಯೋಧರ ಗುಂಡಿನ ದಾಳಿಗೆ 13 ಮಂದಿ ಭಯೋತ್ಪಾದಕರು ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts