ಕ್ರಿಕೆಟ್​ ಕಿರಿಕ್​ನಲ್ಲಿ ಹತ್ಯೆ ಪ್ರಕರಣ: ಕಾಲಿಗೆ ಗುಂಡು ಹೊಡೆದು ಕಿರಾತಕರ ಸೆರೆ

cricket
Published on

ಬೆಂಗಳೂರು ಗ್ರಾಮಾಂತರ: ದೊಡ್ಡಬೆಳವಂಗಲ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಳಗಿನ ಜಾವ ದೊಡ್ಡಬಳ್ಳಾಪುರ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹುಲಿಕುಂಟೆ ಗ್ರಾಮದ ವಿನಯ್ ಹಾಗೂ ತ್ರಿಮೂರ್ತಿ ಬಂಧಿಸಲ್ಪಟ್ಟಿದ್ದಾರೆ.

ಶುಕ್ರವಾರ ದೊಡಬೆಳವಂಗಲದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪಿನ ನಡುವೆ ಮಾರಾಮಾರಿಯಲ್ಲಿ ಇಬ್ಬರು ಯುವಕರು ಚಾಕು ಇರಿತದಿಂದ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಂಟಿಬಿ, ಆರೋಪಿಗಳನ್ನು ಶೀಘ್ರ ಬಂದಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಶವ ಹಸ್ತಾಂತರಕ್ಕೆ ವ್ಯವಸ್ಥೆ ಮಾಡಿಸಿದ್ದರು.

ಪ್ರಕರಣ ಬೆನ್ನತ್ತಿದ ಜಿಲ್ಲಾ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳಗ್ಗೆ ಡಿ.ಕ್ರಾಸ್ ಮೆಲ್ಸುತುವೆ ಬಳಿ ಆರೋಪಿಗಳ ಬೆನ್ನಟ್ಡಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಆರು ಆರೋಪಿಗಳು ಪರಾರಿಯಾಗಿದ್ದು ಬಂಧನಕ್ಕೆ ಹುಡುಕಾಟ ನಡೆಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net