17.8 C
Bengaluru
Wednesday, January 22, 2020

ಕೊಲೆ ರಹಸ್ಯ ಬಿಚ್ಚಿಟ್ಟ ಸಿಸಿ ಕ್ಯಾಮರಾ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

<ಶ್ರೀಮತಿ ಶೆಟ್ಟಿ ಭೀಕರ ಹತ್ಯೆ ಪ್ರಕರಣ>

ಮಂಗಳೂರು: ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಗರದ ಮಂಗಳಾದೇವಿ ಬಳಿಯ ಅಮರ್ ಆಳ್ವ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ(35) ಭೀಕರ ಕೊಲೆ ಪ್ರಕರಣ ಭೇದಿಸುವುದು ಆರಂಭದಲ್ಲಿ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಆಕೆಯ ಇಲೆಕ್ಟ್ರಿಕಲ್ ಅಂಗಡಿ ಸಿಬ್ಬಂದಿ ಹಾಗೂ ವೆಲೆನ್ಸಿಯಾ ಪರಿಸರದ ಸಿಸಿ ಕ್ಯಾಮರಾ ನೀಡಿದ ಮಹತ್ತರ ಸುಳಿವು ಪೊಲೀಸರಿಗೆ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ನೆರವಾಗಿತ್ತು.ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರಿಗೆ ಆಯುಕ್ತರು ಸೂಕ್ತ ಬಹುಮಾನ ಘೋಷಣೆ ಮಾಡಿದ್ದಾರೆ.

ಪೊಲೀಸರು ಆರಂಭದಲ್ಲಿ ಶ್ರೀಮತಿ ಶೆಟ್ಟಿಯವರ ಮಾಜಿ ಗಂಡಂದಿರು, ಸಂಬಂಧಿಕರು, ನೆರೆ ಹೊರೆಯವರನ್ನು ವಿಚಾರಣೆಗೊಳಪಡಿಸಿದ್ದರು. ಆದರೆ ಪೂರಕ ಸುಳಿವು ಸಿಕ್ಕಿರಲಿಲ್ಲ. ಇಲೆಕ್ಟ್ರಿಕಲ್ ಅಂಗಡಿ ಸಿಬ್ಬಂದಿ ವಿಚಾರಣೆ ನಡೆಸಿದಾಗ ಬಹಳಷ್ಟು ಮಾಹಿತಿ ಲಭ್ಯವಾಗಿತ್ತು. ಶ್ರೀಮತಿ ಮತ್ತು ಜೋನಸ್ ಜೂಲಿನ್ ಸ್ಯಾಮ್ಸನ್ ಹಣದ ವ್ಯವಹಾರದಲ್ಲಿ ಮನಸ್ತಾಪ ಇರುವುದು ಮತ್ತು ಹಲವು ಬಾರಿ ಗಲಾಟೆ ನಡೆಯುತ್ತಿದ್ದ ಬಗ್ಗೆ ಸುಳಿವು ನೀಡಿದ್ದರು. ಇದರ ಜತೆಗೆ ಶ್ರೀಮತಿಯವರ ಸ್ಕೂಟರ್ ಕೊಲೆಯಾದ ದಿನ ಸೂಟರ್‌ಪೇಟೆಯತ್ತ ತೆರಳಿರುವುದು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿತ್ತು. ಮೇ 11ರಂದು ಆಕೆ ಆತನ ಮನೆಯ ಕಡೆ ಹೋಗಿದ್ದನ್ನು ಕೆಲವರು ನೋಡಿದ್ದರೂ ಪೊಲೀಸರಿಗೆ ತಿಳಿಸುವ ಧೈರ್ಯವನ್ನು ಯಾರು ಮಾಡಿರಲಿಲ್ಲ.

ಆರೋಪಿ ನ್ಯಾಯಾಂಗ ವಶಕ್ಕೆ: ಪ್ರಕರಣದ ಎರಡನೇ ಆರೋಪಿ ವಿಕ್ಟೋರಿಯಾ ಮಥಾಯಿಸ್‌ಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಮೇ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಮುಖ ಆರೋಪಿ ಜೋನಸ್ ಜೂಲಿನ್ ಸ್ಯಾಮ್ಸನ್(36) ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಕ್ಟೋರಿಯಾ ಮಥಾಯಿಸ್ ಹೇಳಿಕೆ ಪ್ರಕಾರ ಆತನಿಂದ ಕೆಲವೊಂದು ಸೊತ್ತುಗಳನ್ನು ವಶಪಡಿಸಿಕೊಳ್ಳಲು ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜ್ಜಿ ಏಕಾಂಗಿ: ಶ್ರೀಮತಿ ಶೆಟ್ಟಿಯ ಮನೆಯಲ್ಲಿ ಸಂಬಂಧಿ ಅಜ್ಜಿಯೊಬ್ಬರು ವಾಸವಾಗಿದ್ದರು. ಅಡುಗೆ ಹಾಗೂ ಮನೆಯ ಎಲ್ಲ ಕೆಲಸ ಮಾಡುತ್ತಿದ್ದ ಅವರು ಈಗ ಏಕಾಂಗಿಯಾಗಿದ್ದಾರೆ.

ಜಾಮೀನು ಅನುಮಾನ: ಮಹಿಳೆಯ ರುಂಡ-ಮುಂಡ ಬೇರ್ಪಡಿಸಿ ಕ್ರೂರ ಮತ್ತು ಅಮಾನವೀಯವಾಗಿ ಕೊಲೆ ನಡೆಸಿರುವ ಈ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಸದ್ಯಕ್ಕೆ ಜಾಮೀನು ನೀಡುವುದು ಅನುಮಾನ. ಇದನ್ನು ಗಂಭೀರ ಪ್ರಕರಣವಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...