ಮದುವೆಯಾಗಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಯುವಕನ ಬಾಳಲ್ಲಿ ನಡೆದೇಹೋಯ್ತು ದುರಂತ!

233
ಕೊಲೆಯಾದ ಯುವಕ ಗಂಗಾಧರ್
Published on

ಹಾಸನ: ಮದುವೆಯಾಗಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಎನ್ನುವ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರ ಬಳಿ ನಡೆದಿದೆ.

ಕೊಲೆಯಾದ ಯುವಕ ಗಂಗಾಧರ ಮದುವೆಯಾದ ಯುವತಿಯೊಬ್ಬರಿಗೆ ಮೆಸೇಜ್ ಮಾಡಿದ್ದ. ಈ ವಿಚಾರವಾಗಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಗಂಗಾಧರನನ್ನ ಯುವಕರ ತಂಡವೊಂದು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಗಂಗಾಧರ್, ತನ್ನ ಅಣ್ಣನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ಅಣ್ಣ ಮೋಹನ್​ ಎಂಬುವರು ಗಂಗಾಧರ್​ನನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಗಂಗಾಧರ್ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net